Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹರ್ಷಿ ದಯಾನಂದ ಸರಸ್ವತಿ ಜನ್ಮ ದಿನಾಚರಣೆಗೆ ಪ್ರಧಾನಮಂತ್ರಿ ಗೌರವ ನಮನ


ಮಹಾನ್ ಚಿಂತಕ, ಸಾಮಾಜಿಕ ಸುಧಾರಕ ಮತ್ತು ಉತ್ಕಟ ರಾಷ್ಟ್ರೀಯವಾದಿ ಮಹರ್ಷಿ ದಯಾನಂದ ಸರಸ್ವತಿ ಅವರಿಗೆ ಜನ್ಮ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. 

ತಮ್ಮ ಎಕ್ಸ್ ಖಾತೆಯಲ್ಲಿ ಸ್ಮರಿಸಿಕೊಂಡಿರುವ ಪ್ರಧಾನ ಮಂತ್ರಿಗಳು;

“ಮಹಾನ್ ಚಿಂತಕ, ಸಮಾಜ ಸುಧಾರಕ ಮತ್ತು ಉತ್ಕಟ ರಾಷ್ಟ್ರೀಯವಾದಿ ಮಹರ್ಷಿ ದಯಾನಂದ ಸರಸ್ವತಿ ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು. ತಮ್ಮ ಜೀವನದುದ್ದಕ್ಕೂ ಅವರು ಅಜ್ಞಾನ, ಮೂಢನಂಬಿಕೆ ಮತ್ತು ಆಡಂಬರ ಜೀವನದ ವಿರುದ್ಧ ಸಮಾಜವನ್ನು ಜಾಗೃತಗೊಳಿಸುವಲ್ಲಿ ತೊಡಗಿಸಿಕೊಂಡಿದ್ದರು. ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯ ಸಂರಕ್ಷಣೆಯೊಂದಿಗೆ ಶಿಕ್ಷಣ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಅವರ ಪ್ರಯತ್ನಗಳು ದೇಶವಾಸಿಗಳಿಗೆ ಯಾವಾಗಲೂ ಸ್ಫೂರ್ತಿ ನೀಡುತ್ತವೆ.” ಎಂದು ಬರೆದುಕೊಂಡಿದ್ದಾರೆ.

 

 

*****