Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆ ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಪ್ರಧಾನಮಂತ್ರಿ ಮನವಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಎಲ್ಲರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.  ಪ್ರಾಧಿಕಾರಗಳು ಪರಿಸ್ಥಿತಿಯ ಸೂಕ್ಷ್ಮವಾಗಿ ನಿಗಾ ವಹಿಸಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ:

“ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ. ಸಂಭವನೀಯ ಕಂಪನಾ ನಂತರದ ಅವಘಡಗಳ ಬಗ್ಗೆ ಎಚ್ಚರದಿಂದಲು, ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸುವಂತೆ ಮನವಿ ಮಾಡುತ್ತೇನೆ, ಪ್ರಾಧಿಕಾರಗಳು ಪರಿಸ್ಥಿತಿಯ ಮೇಲೆ ಸೂಕ್ಷ್ಮ ನಿಗಾ ವಹಿಸಿವೆ. ”

 

 

*****