Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ. ಮಾಲ್ಕಮ್ ಟರ್ನ್ ಬುಲ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಪ್ರಧಾನಮಂತ್ರಿ


ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ. ಟರ್ನ್ ಬುಲ್ ಅವರು ಇಂದು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿದ್ದರು.

ತಮ್ಮ ಇತ್ತೀಚಿನ ಯಶಸ್ವೀ ಭಾರತ ಭೇಟಿಗಾಗಿ ಟರ್ನ್ ಬುಲ್ ಅವರು ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದರು.
ಕೌಶಲಪೂರ್ಣ ವೃತ್ತಿನಿರತರ ವಿಸಾ ಕಾರ್ಯಕ್ರಮಕ್ಕೆ ಆಸ್ಟ್ರೇಲಿಯಾದ ನಿಯಂತ್ರಣದಲ್ಲಿ ಇತ್ತೀಚೆಗೆ ಮಾಡಿರುವ ಬದಲಾವಣೆಗಳಿಂದ ಆಗಬಹುದಾದ ಪರಿಣಾಮಗಳ ಬಗ್ಗೆ ಪ್ರಧಾನಿ ಮೋದಿ ಅವರು ಕಳವಳ ವ್ಯಕ್ತಪಡಿಸಿದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಎರಡೂ ರಾಷ್ಟ್ರಗಳ ಅಧಿಕಾರಿಗಳು ನಿಕಟ ಸಂಪರ್ಕದಲ್ಲಿರುವ ಕುರಿತು ಇಬ್ಬರೂ ಪ್ರಧಾನಮಂತ್ರಿಗಳು ತಮ್ಮ ಒಪ್ಪಿಗೆ ಸೂಚಿಸಿದರು.

ಶ್ರೀ. ಟರ್ನ್ ಬುಲ್ ಅವರ ಕಳೆದ ತಿಂಗಳ ಭಾರತ ಭೇಟಿಯ ಬಳಿಕ ಕೈಗೊಂಡಿರುವ ಕ್ರಮಗಳ ಬಗ್ಗೆ ಮತ್ತು ದ್ವಿಪಕ್ಷೀಯ ಬಾಂಧವ್ಯ ಬಲಪಡಿಸಲು ಅಗತ್ಯವಿರುವ ಹೆಚ್ಚಿನ ಕ್ರಮಗಳ ಕುರಿತೂ ಇಬ್ಬರೂ ಪ್ರಧಾನಮಂತ್ರಿಗಳು ಚರ್ಚಿಸಿದರು.

******

AKT/AK