Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶದ ಲಖನೌನಲ್ಲಿ ಅಭಿವೃದ್ಧಿ ಉಪಕ್ರಮಗಳನ್ನು ಉದ್ಘಾಟಿಸಿದ ಪ್ರಧಾನಿ

ಉತ್ತರ ಪ್ರದೇಶದ ಲಖನೌನಲ್ಲಿ ಅಭಿವೃದ್ಧಿ ಉಪಕ್ರಮಗಳನ್ನು ಉದ್ಘಾಟಿಸಿದ ಪ್ರಧಾನಿ

ಉತ್ತರ ಪ್ರದೇಶದ ಲಖನೌನಲ್ಲಿ ಅಭಿವೃದ್ಧಿ ಉಪಕ್ರಮಗಳನ್ನು ಉದ್ಘಾಟಿಸಿದ ಪ್ರಧಾನಿ

ಉತ್ತರ ಪ್ರದೇಶದ ಲಖನೌನಲ್ಲಿ ಅಭಿವೃದ್ಧಿ ಉಪಕ್ರಮಗಳನ್ನು ಉದ್ಘಾಟಿಸಿದ ಪ್ರಧಾನಿ

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ಲಖನೌನಲ್ಲಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಕಟ್ಟಡ ಉದ್ಘಾಟಿಸಿದರು, 400 ಕಿ.ವ್ಯಾ. ಲಖನೌ-ಕಾನ್ಪುರ ಡಿ/ಸಿ ವಿದ್ಯುತ್ ಸರಬರಾಜು ಮಾರ್ಗವನ್ನು ದೇಶಕ್ಕಿ ಸಮರ್ಪಿಸಿದರು ಮತ್ತು ಪ್ರಧಾನಮಂತ್ರಿ ವಸತಿ ಯೋಜನೆಯ ಫಲಾನುಭವಿಗಳಿಗೆ ಹಂಚಿಕೆ ಪತ್ರ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ. ಮೋದಿ, ಭಾರತೀಯ ಯುವಕರನ್ನು ಅತ್ಯಾಧುನಿಕ ತಂತ್ರಜ್ಞಾನದ ಜೊತೆ ಸಂಪರ್ಕಿಸುವ ಕುರಿತು ಮಾತನಾಡಿದರು. ನಮ್ಮ ಯುವಜನರು ಆರೋಗ್ಯ ಕ್ಷೇತ್ರದ ಅದರಲ್ಲೂ ಆರೋಗ್ಯ ಸೇವೆಯ ಉಪಕರಣ ಕ್ಷೇತ್ರದಲ್ಲಿ ನವೋದ್ಯಮಗಳ ಮತ್ತು ನಾವಿನ್ಯತೆಯ ಬಗ್ಗೆ ಚಿಂತಿಸಬೇಕು ಎಂದರು.

ಎಲ್ಲ ಜಿಲ್ಲೆಗಳಲ್ಲೂ ವಿದ್ಯುತ್ ಖಾತ್ರಿ ಒದಗಿಸುತ್ತಿರುವ ಉತ್ತರ ಪ್ರದೇಶ ಸರ್ಕಾರವನ್ನು ಪ್ರಧಾನಿ ಅಭಿನಂದಿಸಿದರು. ದೇಶದ ಅಭಿವೃದ್ಧಿಯ ಪಯಣದಲ್ಲಿ ವಿದ್ಯುತ್ ಮತ್ತು ಇಂಧನ ಮಹತ್ವದ ವಿಚಾರವಾಗಿದೆ ಎಂದು ಹೇಳಿದರು. ಭಾರತದಲ್ಲಿ ಇಂದು ಸೌರ ವಿದ್ಯುತ್ ಜನಪ್ರಿಯತೆ ಪಡೆಯುತ್ತಿದೆ ಎಂದರು.

ಜುಲೈ 1ರಿಂದ ಜಿಎಸ್ಟಿ ಜಾರಿಯ ಕುರಿತೂ ಮಾತನಾಡಿದ ಪ್ರಧಾನಿ, ಇದು ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರದರ್ಶಿಸಿದೆ ಎಂದರು. ಜಿಎಸ್ಟಿ ಜಾರಿಯ ಶ್ರೇಯ ಭಾರತದ ಎಲ್ಲ 125 ಕೋಟಿ ಜನರಿಗೂ ಸಲ್ಲುತ್ತದೆ” ಎಂದು ಪ್ರಧಾನಿ ಹೇಳಿದರು.

*****

AKT/AK