Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಮೃತಸರದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಅಮೃತಸರದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದರು.

“ಅಮೃತಸರದ ರೈಲು ದುರಂತದ ಬಗ್ಗೆ ತಿಳಿದು ತೀವ್ರ ದುಃಖವಾಗಿದೆ. ಈ ದುರ್ಘಟನೆ ಹೃದಯವಿದ್ರಾವಕವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಮತ್ತು ಅವರ ಕುಟುಂಬಗಳಿಗೆ ನನ್ನ ಮನದಾಳದ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇನೆ.

ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅಗತ್ಯ ಸಹಾಯಗಳನ್ನು ತ್ವರಿತವಾಗಿ ನೀಡಲು ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ” ಎಂದು ಪ್ರಧಾನಮಂತ್ರಿ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.