Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನ ಫಲಾನುಭವಿಗಳೊಂದಿಗೆ ಮತ್ತು ಜನೌಷಧಿ ಕೇಂದ್ರ ಮಳಿಗೆಗಳ ಮಾಲಿಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಜನೌಷಧಿ ಬಳಕೆಗೆ ಇನ್ನಷ್ಟು ಉತ್ತೇಜನ ನೀಡಲು ಮತ್ತು ಆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ದೇಶಾದ್ಯಂತ ಮಾರ್ಚ್ 7, 2019ನ್ನು ‘ಜನೌಷಧಿ ದಿನ’ವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.

ಸುಮಾರು 5 ಸಾವಿರಕ್ಕೂ ಅಧಿಕ ಸ್ಥಳಗಳ ಫಲಾನುಭವಿಗಳು ಮತ್ತು ಮಳಿಗೆಗಳ ಮಾಲೀಕರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಅವರು, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಗಳು ಲಭ್ಯವಾಗುವಂತೆ ಮಾಡುವ ದೃಷ್ಟಿಯಿಂದ ತಮ್ಮ ಸರ್ಕಾರ ಎರಡು ಪ್ರಮುಖ ಕ್ರಮಗಳನ್ನು ಕೈಗೊಂಡಿದೆ ಎಂದರು. ಮೊದಲಿಗೆ 850 ಅಗತ್ಯ ಔಷಧಗಳ ಬೆಲೆಯನ್ನು ನಿಯಂತ್ರಿಸಲಾಯಿತು ಮತ್ತು ಹೃದಯ ಶಸ್ತ್ರಚಿಕಿತ್ಸೆಗೆ ಬಳಸುವ ಸ್ಟೆಂಟ್ ಗಳು ಮತ್ತು ಮೊಣಕಾಲು ಸರ್ಜರಿಗೆ ಬಳಸುವ ಉಪಕರಣದ ಬೆಲೆಯನ್ನು ಇಳಿಕೆ ಮಾಡಲಾಯಿತು. ಎರಡನೆಯದಾಗಿ ದೇಶಾದ್ಯಂತ ಸರಣಿ ಜನೌಷಧಿ ಕೇಂದ್ರಗಳನ್ನು ತೆರೆಯಲಾಯಿತು. ಈ ಕ್ರಮಗಳಿಂದಾಗಿ ಬಡವರಿಗಷ್ಟೇ ಅಲ್ಲ, ಮಧ್ಯಮ ವರ್ಗದ ಜನರಿಗೂ ಹೆಚ್ಚಿನ ಅನುಕೂಲವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಜನೌಷಧಿ ಕೇಂದ್ರಗಳಲ್ಲಿ ಮಾರುಕಟ್ಟೆ ದರಕ್ಕಿಂತ ಶೇಕಡ 50 ರಿಂದ ಶೇಕಡ 90ರಷ್ಟು ಅಗ್ಗದ ಬೆಲೆಯಲ್ಲಿ ಔಷಧಿಗಳು ದೊರಕುತ್ತಿವೆ ಎಂದು ಪ್ರಧಾನಮಂತ್ರಿ ಹೇಳಿದರು. ಕಳೆದ ನಾಲ್ಕೂವರೆ ವರ್ಷಗಳಲ್ಲಿ 5 ಸಾವಿರಕ್ಕೂ ಅಧಿಕ ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ, ಈ ಕೇಂದ್ರಗಳು ಉತ್ತಮ ಗುಣಮಟ್ಟದ ಔಷಧಿಗಳನ್ನು ಪೂರೈಸುವುದಷ್ಟೇ ಅಲ್ಲದೆ, ಸ್ವಯಂ ಉದ್ಯೋಗ ಒದಗಿಸುತ್ತಿದೆ ಮತ್ತು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಆರೋಗ್ಯ ವಲಯದಲ್ಲಿ ಸಮಗ್ರ ಬದಲಾವಣೆಯ ದೂರದೃಷ್ಟಿಯ ಕುರಿತಂತೆ ಮಾತನಾಡಿದ ಪ್ರಧಾನಮಂತ್ರಿ ಅವರು, ತಮ್ಮ ಸರ್ಕಾರದ ಧೋರಣೆಯೆಂದರೆ ‘ಬರಿ ಹಗೆತನವಲ್ಲ-ಕೇವಲ ಪರಿಹಾರಗಳು’ ಎಂಬುದಾಗಿದೆ. ಆರೋಗ್ಯ ವಲಯಕ್ಕೆ ಸಂಬಂಧಿಸಿದ ಎಲ್ಲ ವಿಭಾಗದವರು ಒಗ್ಗೂಡಿ ವಲಯದಲ್ಲಿ ಬದಲಾವಣೆಗಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದರು. ಕಳೆದ ನಾಲ್ಕೂವರೆ ವರ್ಷಗಳಲ್ಲಿ 15 ಹೊಸ ಏಮ್ಸ್ ಗಳನ್ನು ನಿರ್ಮಾಣ ಮಾಡಲಾಗಿದೆ ಅಥವಾ ನಿರ್ಮಾಣ ಪ್ರಕ್ರಿಯೆ ಪ್ರಗತಿಯಲ್ಲಿದೆ ಮತ್ತು 31 ಸಾವಿರ ಎಂಬಿಬಿಎಸ್ ಮತ್ತು ಸ್ನಾತಕೋತ್ತರ

ಸೀಟುಗಳನ್ನು ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಳ ಮಾಡಲಾಗಿದೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿ ಅವರೊಂದಿಗೆ ಸಂವಾದದಲ್ಲಿ ಭಾಗಿಯಾದ ಫಲಾನುಭವಿಗಳು, ಜನೌಷಧಿ ಕೇಂದ್ರಗಳಲ್ಲಿ ಗುಣಮಟ್ಟದ ಔಷಧಗಳು ಲಭ್ಯವಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ವೈದ್ಯಕೀಯ ವೆಚ್ಚ ತಗ್ಗಿರುವುದರಿಂದ ತಮಗೆ ಹಣ ಉಳಿತಾಯದ ಜೊತೆಗೆ ಉತ್ತಮ ವೈದ್ಯಕೀಯ ಸೌಕರ್ಯ ದೊರಕುತ್ತಿದೆ ಎಂದು ಫಲಾನುಭವಿಗಳು ತಮ್ಮ ಅನುಭವವನ್ನು ಹಂಚಿಕೊಂಡರು.