Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾರಿಶಕ್ತಿ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಸಂವಾದ

ನಾರಿಶಕ್ತಿ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಸಂವಾದ

ನಾರಿಶಕ್ತಿ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಸಂವಾದ

ನಾರಿಶಕ್ತಿ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಸಂವಾದ


ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಾರಿಶಕ್ತಿ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿ ಅವರ ಸಾಧನೆಯನ್ನು ಅಭಿನಂದಿಸಿದರು.

ನಾರಿಶಕ್ತಿ ಪುರಸ್ಕೃತರ ಮಹತ್ಕಾರ್ಯವು ಬೇರೆಯವರಿಗೆ ಸ್ಪೂರ್ತಿದಾಯಕವಾಗಿದ್ದು, ಈ ನಿಟ್ಟಿನಲ್ಲಿ ಪುರಸ್ಕೃತರೆಲ್ಲರೂ ತಮ್ಮ ಸಾಧನೆಯ ಹಾದಿಯಲ್ಲಿ ಇನ್ನೂ ಮುಂದೆ ಸಾಗಬೇಕು ಎಂದು ಸಲಹೆ ನೀಡಿದರು.

ಸ್ವಚ್ಛ ಭಾರತ್ ಅಭಿಯಾನ ಕುರಿತು ಉಲ್ಲೇಖಿಸಿದ ಪ್ರಧಾನ ಮಂತ್ರಿಗಳು, ಮಹಿಳೆಯರು ಈ ಅಭಿಯಾನಕ್ಕೆ ಮಹತ್ವ ನೀಡುತ್ತಿದ್ದು, ಇದರ ಸಂಪೂರ್ಣ ಯಶಸ್ಸು ಅವರಿಗೆ ಸಲ್ಲಬೇಕು. ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳದಲ್ಲಿ ಸ್ವಚ್ಛತೆಯೇ ಚರ್ಚೆಯ ಪ್ರಧಾನ ವಿಷಯವಾಗಿತ್ತು ಎಂದು ಅವರು ತಿಳಿಸಿದರು. ಈಗ ಸ್ವಚ್ಛ ಭಾರತ ಸಾರ್ವಜನಿಕ ಆಂದೋಲನವಾಗಿದೆ ಎಂದು ಅವರು ಹೇಳಿದರು.

ಸ್ವಚ್ಛತಾ ಆಂದೋಲನದ ಹಾದಿಯಲ್ಲಿ ಮುಂದಿನ ಹೆಜ್ಜೆ ಕಸದಿಂದ ರಸ ಎಂಬುದಾಗಿದೆ ಎಂದು ಪ್ರಧಾನಮಂತ್ರಿಗಳು ಹೇಳಿದರು.

ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ ಮತ್ತು ಮಿಶನ್ ಇಂದ್ರಧನುಷ್ ಮೂಲಕ ಮಕ್ಕಳಿಗೆ ಲಸಿಕಾ ಕಾರ್ಯಕ್ರಮದ ಕುರಿತು ಪ್ರಧಾನಿಮಂತ್ರಿಗಳು ಪ್ರಸ್ತಾಪಿಸಿದರು. ಈ ಎರಡೂ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಲು ಮಹಿಳೆಯರು ಅತ್ಯಂತ ಪ್ರಮುಖ ಪಾತ್ರವಹಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ. ಮೇನಕಾ ಗಾಂಧಿ ಉಪಸ್ಥಿತರಿದ್ದರು.

*****