Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಿಯಾಗೋ ಮರಡೋನಾ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಡಿಯಾಗೋ ಮರಡೋನಾ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ಟ್ವೀಟ್ ಸಂದೇಶದಲ್ಲಿಡಿಯಾಗೋ ಮರಡೋನಾ ಫುಟ್ಬಾಲ್ ಪರಿಣಿತರಾಗಿದ್ದರು, ಜಾಗತಿಕ ಜನಪ್ರಿಯತೆಯನ್ನು ಪಡೆದಿದ್ದರು. ಅವರ ವೃತ್ತಿಜೀವನದುದ್ದಕ್ಕೂ ಅವರು ಫುಟ್ಬಾಲ್ ಮೈದಾನದಲ್ಲಿ ಕೆಲವು ಅತ್ಯಮೂಲ್ಯ ಕ್ರೀಡಾ ಕ್ಷಣಗಳನ್ನು ನಮಗೆ ನೀಡಿದ್ದರು. ಅವರ ಅಕಾಲಿಕ ನಿಧನ ನಮ್ಮೆಲ್ಲರಿಗೂ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ.” ಎಂದು ತಿಳಿಸಿದ್ದಾರೆ.

***