Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮೊಜಾಂಬಿಕ್ ನ ರಾಷ್ಟ್ರೀಯ ಅಸೆಂಬ್ಲಿಗೆ ಭೇಟಿ, ಮಾಲುಆನದ ವಿಜ್ಞಾನ ಮತ್ತು ತಂತ್ರಜ್ಞಾನ ಪಾರ್ಕ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮ್ಯಾಪುಟೋದಲ್ಲಿರುವ ಮೊಜಾಂಬಿಕ್ ರಾಷ್ಟ್ರೀಯ ಅಸೆಂಬ್ಲಿಗೆ ಭೇಟಿ ನೀಡಿದ್ದರು. ಅಲ್ಲಿ ಅವರು ರಾಷ್ಟ್ರೀಯ ಅಸೆಂಬ್ಲಿಯ ಅಧ್ಯಕ್ಷರಾದ ಶ್ರೀಮತಿ ವೆರೋನಿಕಾ ಮಕಾಮೋ ಅವರೊಂದಿಗೆ ಚರ್ಚೆ ನಡೆಸಿದರು.

ಪ್ರಧಾನಮಂತ್ರಿಯವರು ನಾವಿನ್ಯ ಮತ್ತು ತಂತ್ರಜ್ಞಾನ ಅಭಿವೃದ್ಧಿ ಕೇಂದ್ರಕ್ಕೂ ಭೇಟಿ ನೀಡಿದ್ದರು. ಮಾಲುಆನದ ವಿಜ್ಞಾನ ಮತ್ತು ತಂತ್ರಜ್ಞಾನ ಪಾರ್ಕ್ ನಲ್ಲಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ಕೇಂದ್ರವು ಐ.ಟಿ. ಸಂಬಂಧಿತ ಕ್ಷೇತ್ರಗಳಲ್ಲಿ ತರಗತಿ ಕೊಠಡಿಯ ತರಬೇತಿ ಸೇರಿದಂತೆ ಪ್ರಮುಖ ಸೇವೆಯನ್ನು ಒದಗಿಸುತ್ತದೆ ಮತ್ತು ತಾಂತ್ರಿಕ ನವೋದ್ಯಮಗಳಿಗೆ ವಿಕಾಸದ ಸ್ಥಾನ ಒದಗಿಸಲಿದೆ.

ಅಲ್ಲಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಕೇಂದ್ರದಲ್ಲಿ ಕೆಲಸ ಮಾಡಿದ ಅನುಭವವನ್ನು ಹಂಚಿಕೊಳ್ಳುವಂತೆ ಅವರಿಗೆ ಉತ್ತೇಜನ ನೀಡಿದರು. ಭಾರತೀಯ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳನ್ನು ಅವರೂ ಭೇಟಿ ಮಾಡಿದರು.

ಮ್ಯಾಪುಟೋದಲ್ಲಿ ಭಾರತೀಯ ಸಮುದಾಯದೊಂದಿಗೆ ಮಾತುಕತೆ ನಡೆಸಿದ ಪ್ರಧಾನಮಂತ್ರಿಯವರು, ಭಾರತೀಯ ಸಮುದಾಯಕ್ಕೆ ತಮ್ಮ ಗುರುತಿಸುವಿಕೆಗೆ ಮೊದಲು ಸ್ವರೂಪ ನೀಡಿದ್ದೇ ಆಫ್ರಿಕಾ ಎಂದು ಹೇಳಿದರು. ಹಲವು ಪೀಳಿಗೆಯಿಂದ ಭಾರತೀಯ ಸಂಪ್ರದಾಯವನ್ನು ಜೀವಂತವಾಗಿ ಉಳಿಸಿಕೊಂಡು ಬಂದಿರುವ ಸಮುದಾಯವನ್ನು ಅವರು ಪ್ರಶಂಸಿಸಿದರು.