Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾರತದ ಅತ್ಯುತ್ತಮ ಸಾಧನೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾರತದ ಅಸಾಧಾರಣ ಪ್ರದರ್ಶನದ ಬಗ್ಗೆ ಅಪಾರ ಸಂತೋಷ ಮತ್ತು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಭಾರತೀಯ ತಂಡವು ನಾಲ್ಕು ಚಿನ್ನದ ಪದಕ ಮತ್ತು ಒಂದು ಬೆಳ್ಳಿ ಪದಕವನ್ನು ತಾಯ್ನಾಡಿಗೆ ತಂದಿದೆ.

ಈ ಸಂಬಂಧ ಎಕ್ಸ್‌ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

‘‘ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾರತವು ತನ್ನ ಅತ್ಯುತ್ತಮ ಪ್ರದರ್ಶನ ನೀಡಿ 4ನೇ ಸ್ಥಾನವನ್ನು ಪಡೆದಿರುವುದು ಅಪಾರ ಸಂತೋಷ ಮತ್ತು ಹೆಮ್ಮೆಯ ವಿಷಯವಾಗಿದೆ. ನಮ್ಮ ತಂಡವು 4 ಚಿನ್ನ ಮತ್ತು 1 ಬೆಳ್ಳಿ ಪದಕವನ್ನು ತಾಯ್ನಾಡಿಗೆ ತಂದಿದೆ. ಈ ಸಾಧನೆಯು ಇತರ ಹಲವಾರು ಯುವಕರಿಗೆ ಸ್ಫೂರ್ತಿ ನೀಡುತ್ತದೆ ಮತ್ತು ಗಣಿತವನ್ನು ಇನ್ನಷ್ಟು ಜನಪ್ರಿಯಗೊಳಿಸಲು ಸಹಾಯ ಮಾಡುತ್ತದೆ,’’ ಎಂದಿದ್ದಾರೆ.

 

 

*****