Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಂತಾರಾಷ್ಟ್ರೀಯ ಮಹಿಳಾ ದಿನದಂದು ಮಹಿಳಾ ಸಬಲೀಕರಣದ ಬದ್ಧತೆ ಪ್ರಧಾನಮಂತ್ರಿಗಳಿಂದ ಪುನರುಚ್ಚಾರ 


ಅಂತಾರಾಷ್ಟ್ರೀಯ ಮಹಿಳಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾರಿ ಶಕ್ತಿಗೆ ನಮಿಸಿದ್ದಾರೆ.

ನಮ್ಮ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಸದಾ ಶ್ರಮಿಸಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. “ಭರವಸೆ ನೀಡಿದಂತೆ ಇಂದು, ನನ್ನ ಸಾಮಾಜಿಕ ಮಾಧ್ಯಮ ಖಾತೆಗಳ ನಿರ್ವಹಣೆಯನ್ನು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮಹಿಳೆಯರಿಗೆ ನೀಡಿದ್ದೇನೆ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್‌ ಪೋಸ್ಟ್‌ ಹೀಗಿದೆ:

“#WomensDay ದಂದು ನಮ್ಮ ನಾರಿ ಶಕ್ತಿಗೆ ನಮನಗಳು! ಮಹಿಳೆಯರ ಸಬಲೀಕರಣಕ್ಕಾಗಿ ನಮ್ಮ ಸರ್ಕಾರ ಸದಾ ಕಾರ್ಯನಿರ್ವಹಿಸಿದ್ದು, ಇದು ನಮ್ಮ ಯೋಜನೆಗಳು ಮತ್ತು ಕಾರ್ಯಕ್ರಮಗಳಲ್ಲಿ ಪ್ರತಿಫಲಿತವಾಗಿದೆ. ಭರವಸೆ ನೀಡಿದಂತೆ, ವಿವಿಧ ಕ್ಷೇತ್ರಗಳಲ್ಲಿ ಛಾಪು ಮೂಡಿಸುತ್ತಿರುವ ಮಹಿಳೆಯರು ಇಂದು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ವಹಿಸಲಿದ್ದಾರೆ!”

*****