Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

‘ಅಂಫಾನ್’ ಚಂಡಮಾರುತ ನಿರ್ವಹಣೆಯ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ


ಬಂಗಾಳಕೊಲ್ಲಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ‘ಅಂಫಾನ್’ಚಂಡಮಾರುತದ ನಿರ್ವಹಣೆ ಕ್ರಮಗಳನ್ನು ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು.

PM India

ಪ್ರಧಾನಮಂತ್ರಿಯವರು ಪರಿಸ್ಥಿತಿಯ ಸಂಪೂರ್ಣ ಚಿತ್ರಣವನ್ನು ಪರಿಶೀಲಿಸಿದರು ಮತ್ತು ಪ್ರತಿಕ್ರಿಯೆಯ ಸಿದ್ಧತೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಾಣಾ ಪಡೆ (ಎನ್‌ಡಿಆರ್‌ಎಫ್) ಮಂಡಿಸಿದ ಸ್ಥಳಾಂತರ ಯೋಜನೆಯನ್ನು ಪರಿಶೀಲಿಸಿದರು.

PM India25 ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದ್ದು, ಇನ್ನೂ 12 ತಂಡಗಳು ಸಿದ್ಧವಾಗಿವೆ. ಇತರ 24 ಎನ್‌ಡಿಆರ್‌ಎಫ್ ತಂಡಗಳು ದೇಶದ ವಿವಿಧ ಭಾಗಗಳಲ್ಲಿ ಸನ್ನದ್ಧವಾಗಿವೆ ಎಂದು ಎನ್‌ಡಿಆರ್‌ಎಫ್  ಮಹಾ ನಿರ್ದೆಶಕರು ಮಾಹಿತಿ ನೀಡಿದರು.

PM India

ಸಭೆಯಲ್ಲಿ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಪ್ರಧಾನಮಂತ್ರಿಯ ಪ್ರಧಾನ ಸಲಹೆಗಾರ ಶ್ರೀ ಪಿ.ಕೆ. ಸಿನ್ಹಾ, ಸಂಪುಟ ಕಾರ್ಯದರ್ಶಿ ಶ್ರೀ ರಾಜೀವ್ ಗೌಬಾ, ಭಾರತ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.