Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಂಫಾನ್ ಚಂಡಮಾರುತ – ಪಶ್ಚಿಮ ಬಂಗಾಳದಲ್ಲಿ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನ ಮಂತ್ರಿ

 


ಅಂಫಾನ ಚಂಡಮಾರುತದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಇಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದರು. ಅವರೊಂದಿಗೆ ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್, ಕೇಂದ್ರ ರಾಜ್ಯ ಸಚಿವರಾದ ಶ್ರೀ ಬಾಬುಲ್ ಸುಪ್ರಿಯೋ, ಶ್ರೀ ಪ್ರತಾಪ್ ಚಂದ್ರ ಸಾರಂಗಿ ಮತ್ತು ಶ್ರೀಮತಿ ದೇಬಶ್ರೀ ಚೌಧುರಿ ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ್ ಧನ್ ಖರಂಡ್, ಮುಖ್ಯಮಂತ್ರಿ ಶ್ರೀಮತಿ ಮಮತಾ ಬ್ಯಾನರ್ಜಿ ಅವರೊಂದಿಗಿದ್ದರು. ಪ್ರಧಾನ ಮಂತ್ರಿಯವರು ಪಶ್ಚಿಮ ಬಂಗಾಳದ ಚಂಡಮಾರುತ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.

ನಂತರ ಪ್ರಧಾನಿಯವರು, ಪಶ್ಚಿಮ ಬಂಗಾಳದಲ್ಲಿ ಕೈಗೊಂಡಿರುವ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಪರಿಶೀಲಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಎಲ್ಲಾ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಪಶ್ಚಿಮ ಬಂಗಾಳ ರಾಜ್ಯಕ್ಕೆ ತಕ್ಷಣದ ಪರಿಹಾರ ಕಾರ್ಯಗಳಿಗಾಗಿ 1,000 ಕೋಟಿ ರೂ. ಹಣಕಾಸು ನೆರವು ಪ್ರಕಟಟಿಸಿದರು. ರಾಜ್ಯದಿಂದ ಸಹಾಯಕ್ಕಾಗಿ ಕೋರಿಕೆ ಬಂದ ನಂತರ, ಕೇಂದ್ರ ಸರ್ಕಾರವು ರಾಜ್ಯದಲ್ಲಿ ಆಗಿರುವ ಹಾನಿಯ ಪ್ರಮಾಣವನ್ನು ನಿರ್ಣಯಿಸಲು, ಅಂತರ-ಸಚಿವಾಲಯ ತಂಡವನ್ನು ರಾಜ್ಯಕ್ಕೆ ಕಳುಹಿಸುತ್ತದೆ. ಅದರ ವರದಿಯ ಆಧಾರದ ಮೇಲೆ ಹೆಚ್ಚಿನ ನೆರವು ನೀಡಲಾಗುವುದು.

ಪ್ರಧಾನಿಯವರು ಪಶ್ಚಿಮ ಬಂಗಾಳದ ಜನರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ವಿಪತ್ತಿನಿಂದಾಗಿ ತಮ್ಮ ಸಂಬಂಧಿಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಚಂಡಮಾರುತದಿಂದ ಮೃತಪಟ್ಟ ಕುಟುಂಬದವರಿಗೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ.ಪರಿಹಾರವನ್ನು ಪ್ರಧಾನಿ ಘೋಷಿಸಿದರು.

ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ, ಸಂತ್ರಸ್ತ ಪ್ರದೇಶಗಳಲ್ಲಿನ ಮೂಲಸೌಕರ್ಯಗಳ ಮರುಸ್ಥಾಪನೆ ಮತ್ತು ಪುನರ್ನಿರ್ಮಾಣಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತದೆ ಎಂದು ಪ್ರಧಾನಿ ರಾಜ್ಯದ ಜನರಿಗೆ ಭರವಸೆ ನೀಡಿದರು.

ಈ ವರ್ಷ ಪಶ್ಚಿಮ ಬಂಗಾಳ ರಾಜ್ಯಕ್ಕೆ ಪ್ರಧಾನ ಮಂತ್ರಿಯವರ ಎರಡನೇ ಭೇಟಿ ಇದಾಗಿದ್ದು, ಈ ವರ್ಷ ಅನೇಕ ಬಾರಿ ಭೇಟಿ ನೀಡಿರುವ ಉತ್ತರ ಪ್ರದೇಶವನ್ನು ಹೊರತುಪಡಿಸಿದರೆ ಪ್ರಧಾನಿಯವರ ಎರಡನೇ ಭೇಟಿಯ ಏಕೈಕ ರಾಜ್ಯ ಪಶ್ಚಿಮ ಬಂಗಾಳವಾಗಿದೆ. ಪ್ರಧಾನಿಯವರು ಈ ವರ್ಷದ ಆರಂಭದಲ್ಲಿ ಜನವರಿ 11-12 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು. ಕೋಲ್ಕತ್ತಾ ಪೋರ್ಟ್ ಟ್ರಸ್ಟ್‌ನ 150 ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಪಾಲ್ಗೊಂಡಿದ್ದರು, ಕೋಲ್ಕತ್ತಾದ ನಾಲ್ಕು ನವೀಕರಿಸಿದ ಪಾರಂಪರಿಕ ಕಟ್ಟಡಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದರು. ಪ್ರಧಾನಿಯವರು ಬೇಲೂರು ಮಠಕ್ಕೂ ಭೇಟಿ ನೀಡಿದ್ದರು