Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಪ್ಲೈಡ್ ಮೆಟೀರಿಯಲ್ಸ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗ್ಯಾರಿ ಇ ಡಿಕರ್ಸನ್ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ

ಅಪ್ಲೈಡ್ ಮೆಟೀರಿಯಲ್ಸ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗ್ಯಾರಿ ಇ ಡಿಕರ್ಸನ್ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾಷಿಂಗ್ಟನ್ ಡಿಸಿಯಲ್ಲಿ ಅಪ್ಲೈಡ್ ಮೆಟೀರಿಯಲ್ಸ್ ಅಧ್ಯಕ್ಷ ಮತ್ತು ಸಿಇಒ ಶ್ರೀ ಗ್ಯಾರಿ ಇ ಡಿಕರ್ಸನ್ ಅವರನ್ನು ಭೇಟಿ ಮಾಡಿದರು.

ಭಾರತದಲ್ಲಿ ಸೆಮೆಕಂಡಕ್ಟರ್‌ ಪೂರಕ ವ್ಯವಸ್ಥೆಯನ್ನು ಬಲಪಡಿಸಲು ಕೊಡುಗೆ ನೀಡುವಂತೆ ಅಪ್ಲೈಡ್ ಮೆಟೀರಿಯಲ್ಸ್ ಸಂಸ್ಥೆಯನ್ನು ಪ್ರಧಾನಮಂತ್ರಿ ಆಹ್ವಾನಿಸಿದರು. ಭಾರತದಲ್ಲಿ ಪ್ರಕ್ರಿಯೆ ತಂತ್ರಜ್ಞಾನ ಮತ್ತು ಸುಧಾರಿತ ಪ್ಯಾಕೇಜಿಂಗ್ ಸಾಮರ್ಥ್ಯಗಳ ಅಭಿವೃದ್ಧಿಗೂ ಸಹ ಅಪ್ಲೈಡ್ ಮೆಟೀರಿಯಲ್ಸ್ ಅನ್ನು ಪ್ರಧಾನಮಂತ್ರಿ ಆಹ್ವಾನಿಸಿದರು.

ಕೌಶಲ್ಯ ಭರಿತ ಉದ್ಯೋಗಿಗಳ ಪಡೆಯನ್ನು ರಚಿಸಲು ಭಾರತದಲ್ಲಿನ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಅಪ್ಲೈಡ್ ಮೆಟೀರಿಯಲ್ಸ್ ಸಹಯೋಗದ ಸಂಭಾವ್ಯತೆಯ ಕುರಿತು ಪ್ರಧಾನ ಮಂತ್ರಿ ಮತ್ತು ಶ್ರೀ ಡಿಕರ್ಸನ್ ಚರ್ಚಿಸಿದರು.

****