Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಅಮೆರಿಕದಲ್ಲಿ ನಡೆದ 16ನೇ ವಿಶ್ವ ವುಶು ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ರೋಶಿಬಿನಾ ದೇವಿ, ಕುಶಾಲ ಕುಮಾರ ಮತ್ತು ಚಾವಿ ಅವರನ್ನು ಅಭಿನಂದಿಸಿದ ಪ್ರಧಾನ ಮಂತ್ರಿಗಳು 


ಇತ್ತೀಚೆಗೆ ಅಮೆರಿಕದಲ್ಲಿ ನಡೆದ 16ನೇ ವಿಶ್ವ ವುಶು ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ರೋಶಿಬಿನಾ ದೇವಿ, ಕುಶಾಲ ಕುಮಾರ ಮತ್ತು ಚಾವಿ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಸಂಬಂಧ ʼಎಕ್ಸ್‌ʼ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪೋಸ್ಟ್‌ ಮಾಡಿರುವ ಪ್ರಧಾನ ಮಂತ್ರಿಗಳು,

“ಇತ್ತೀಚೆಗೆ ಅಮೆರಿಕದಲ್ಲಿ ನಡೆದ 16ನೇ ವಿಶ್ವ ವುಶು ಚಾಂಪಿಯನ್‌ಶಿಪ್‌ನಲ್ಲಿ ಪದಕಗಳನ್ನು ಗೆದ್ದ ನಮ್ಮ ವುಶು ಚಾಂಪಿಯನ್‌ಗಳಾದ ರೋಶಿಬಿನಾ ದೇವಿ, ಕುಶಾಲ ಕುಮಾರ ಮತ್ತು ಚಾವಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರ ಬದ್ಧತೆ ಮತ್ತು ಕೌಶಲ್ಯವು ನಿಜಕ್ಕೂ ದೇಶ ಹೆಮ್ಮೆಪಡುವಂತೆ ಮಾಡಿದೆ. ಅವರ ಈ ಯಶಸ್ಸು ಭಾರತದಲ್ಲಿ ವುಶುವನ್ನು ಇನ್ನಷ್ಟು ಜನಪ್ರಿಯಗೊಳಿಸುವ ವಿಶ್ವಾಸ ಮೂಡಿಸಿದೆ. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು,ʼʼ ಎಂದು ಶುಭ ಹಾರೈಸಿದ್ದಾರೆ.

****