Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಮೆರಿಕದ ಮಾಜಿ ಅಧ್ಯಕ್ಷರಾದ ಶ್ರೀ ಜಿಮ್ಮಿ ಕಾರ್ಟರ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಮೆರಿಕದ ಮಾಜಿ ಅಧ್ಯಕ್ಷರಾದ ಶ್ರೀ ಜಿಮ್ಮಿ ಕಾರ್ಟರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 

Xನ ಪೋಸ್ಟ್ ನಲ್ಲಿ, ಅವರು:

“ಅಮೆರಿಕದ ಮಾಜಿ ಅಧ್ಯಕ್ಷರಾದ ಜಿಮ್ಮಿ ಕಾರ್ಟರ್ ಅವರ ನಿಧನವು ನನಗೆ ತೀವ್ರ ದುಃಖ ತಂದಿದೆ. ಮಹಾನ್ ದೂರದೃಷ್ಟಿಯ ರಾಜನೀತಿಜ್ಞರಾಗಿದ್ದ ಅವರು ಜಾಗತಿಕ ಶಾಂತಿ ಮತ್ತು ಸಾಮರಸ್ಯಕ್ಕಾಗಿ ದಣಿಯದೆ ದುಡಿದಿದ್ದಾರೆ. ಪ್ರಬಲವಾದ ಭಾರತ-ಯು.ಎಸ್. ಸಂಬಂದವನ್ನು ಬೆಳೆಸುವಲ್ಲಿ ಅವರ ಕೊಡುಗೆ ಅಪಾರ. ಅವರ ಕುಟುಂಬ, ಸ್ನೇಹಿತರು ಮತ್ತು ಯುಎಸ್ ಜನರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ದೇವರು ಅವರಿಗೆ ಚಿರಶಾಂತಿಯನ್ನು ನೀಡಲಿ” ಎಂದು ಟ್ವೀಟ್ ಮಾಡಿದ್ದಾರೆ.

 

 

*****