Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು

ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು


ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಶ್ರೀಮತಿ ತುಳಸಿ ಗಬ್ಬಾರ್ಡ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಶ್ರೀಮತಿ ಗಬ್ಬಾರ್ಡ್ ಅವರೊಂದಿಗಿನ ತಮ್ಮ ಹಿಂದಿನ ಸಂವಾದವನ್ನು ಪ್ರಧಾನಮಂತ್ರಿ ಅವರು ಪ್ರೀತಿಯಿಂದ ಸ್ಮರಿಸಿದರು. ದ್ವಿಪಕ್ಷೀಯ ಗುಪ್ತಚರ ಸಹಕಾರವನ್ನು ಹೆಚ್ಚಿಸುವುದು, ವಿಶೇಷವಾಗಿ ಭಯೋತ್ಪಾದನೆ ನಿಗ್ರಹ, ಸೈಬರ್ ಭದ್ರತೆ, ಹೊರಹೊಮ್ಮು ತ್ತಿರುವ ಬೆದರಿಕೆಗಳು ಮತ್ತು ಕಾರ್ಯತಂತ್ರದ ಗುಪ್ತಚರ ಮಾಹಿತಿ ಹಂಚಿಕೆಯ ಕುರಿತು ಅವರ ಚರ್ಚೆಗಳು ಸ್ಪರ್ಶಿಸಿದವು. ಅವರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು, ಸುರಕ್ಷಿತ, ಸ್ಥಿರ ಮತ್ತು ನಿಯಮ ಆಧಾರಿತ ಅಂತಾರಾಷ್ಟ್ರೀಯ ಕ್ರಮಕ್ಕೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

 

*****