Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಸಾವು – ಪ್ರಧಾನಮಂತ್ರಿ ಸಂತಾಪ


ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಕಾರ್ಖಾನೆ ಅವಘಡದಲ್ಲಿ ಜೀವಹಾನಿಯಾಗಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರವನ್ನು ಅವರು ಘೋಷಿಸಿದ್ದಾರೆ.

ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್‌ ಹ್ಯಾಂಡಲ್ ಪೋಸ್ಟ್ ಹೀಗಿದೆ:

“ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಕಾರ್ಖಾನೆ ದುರಂತದಲ್ಲಿ ಜೀವಹಾನಿಯಾಗಿರುವುದು ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ನೆರವು ನೀಡುತ್ತಿದೆ.

ಈ ಅವಘಡದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿಎಂಎನ್‌ಆರ್‌ಎಫ್ ನಿಂದ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi”

 

“ఆంధ్రప్రదేశ్ లోని అనకాపల్లి జిల్లా ఫ్యాక్టరీ ప్రమాదంలో జరిగిన ప్రాణనష్టం అత్యంత బాధాకరం. ఈ ప్రమాదంలో తమ ఆత్మీయులను కోల్పోయిన వారికి ప్రగాఢ సానుభూతి తెలియజేస్తున్నాను. క్షతగాత్రులు త్వరగా కోలుకోవాలని ప్రార్థిస్తున్నాను. స్థానిక యంత్రాంగం బాధితులకు సహకారం అందజేస్తోంది. ఈ ప్రమాదంలో మరణించిన వారి కుటుంబాలకు పి.ఎం.ఎన్.ఆర్.ఎఫ్. నుంచి రూ. 2 లక్షలు ఎక్స్ గ్రేషియా, గాయపడిన వారికి రూ. 50,000 అందజేయడం జరుగుతుంది : PM@narendramodi

 

*****