Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಂಧ್ರಪ್ರದೇಶದ ನೂತನ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಭಾಗಿ

ಆಂಧ್ರಪ್ರದೇಶದ ನೂತನ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಭಾಗಿ


ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಎನ್ ಚಂದ್ರಬಾಬು ನಾಯ್ಡು ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನ ಮಂತ್ರಿ ಅವರು ಈ ಕುರಿತು “ಎಕ್ಸ್”ನಲ್ಲಿ ಪೋಸ್ಟ್ ಮಾಡಿದ್ದು:

ಆಂಧ್ರಪ್ರದೇಶದ ನೂತನ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದೆ.  ನೂತನ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರಿಗೆ ಮತ್ತು ಹೊಸ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ಅಭಿನಂದನೆಗಳು. ಟಿಡಿಪಿ, ಜನಸೇನೆ ಮತ್ತು ಬಿಜೆಪಿ ಸರ್ಕಾರವು ಆಂಧ್ರ ಪ್ರದೇಶವನ್ನು ವೈಭವದ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮತ್ತು ರಾಜ್ಯದ ಯುವಜನರ ಆಕಾಂಕ್ಷೆಗಳನ್ನು ಪೂರೈಸಲು ಸಂಪೂರ್ಣ ಬದ್ಧವಾಗಿದೆ ಎಂದಿದ್ದಾರೆ.

 

 

 

ಪ್ರಧಾನ ಮಂತ್ರಿ ಅವರು ವೀಡಿಯೊ ಹಂಚಿಕೊಂಡಿದ್ದಾರೆ;

 

 

ಪ್ರಧಾನ ಮಂತ್ರಿಗಳ ಕಾರ್ಯಾಲಯ ಸಹ ಪೋಸ್ಟ್ ಮಾಡಿದೆ;

 

“ಆಂಧ್ರಪ್ರದೇಶದ ನೂತನ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಅವರು ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಮತ್ತು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಇತರೆ ನಾಯಕರನ್ನು ಅಭಿನಂದಿಸಿದ್ದಾರೆ”. 

 

 
*****