Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಂಧ್ರಪ್ರದೇಶ ರೈಲು ಅಪಘಾತ; ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರೊಂದಿಗೆ ಪ್ರಧಾನ ಮಂತ್ರಿ ಮಾತುಕತೆ


ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶ ರೈಲು ಅಪಘಾತ ಕುರಿತು ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತುಕತೆ ನಡೆಸಿದರು. ಅಲಮಂಡ ಮತ್ತು ಕಂಟಕಪಲ್ಲಿ ವಿಭಾಗದಲ್ಲಿ ರೈಲು ಹಳಿತಪ್ಪಿದ ದುರದೃಷ್ಟಕರ ಘಟನೆ ಹಿನ್ನೆಲೆಯಲ್ಲಿ ಶ್ರೀ ಮೋದಿ ಅವರು ಪರಿಸ್ಥಿತಿಯ  ಅವಲೋಕನ ನಡೆಸಿದರು.

ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಪ್ರಧಾನ ಮಂತ್ರಿ ಅವರು ಮುಂದಿನ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ.ಪರಿಹಾರ ಧನ ಘೋಷಿಸಿದರು.

ಈ ಕುರಿತು Xನಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿಗಳ ಕಾರ್ಯಾಲಯ;

“ಪ್ರಧಾನಿ @narendramodi ಅವರು ರೈಲ್ವೆ ಸಚಿವ ಶ್ರೀ @ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಲಮಂಡ ಮತ್ತು ಕಂಟಕಪಲ್ಲಿ ವಿಭಾಗದ ನಡುವೆ ರೈಲು ಹಳಿತಪ್ಪಿದ ದುರದೃಷ್ಟಕರ ಘಟನೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕಿಸಿದರು.

ಸಂತ್ರಸ್ತರಿಗೆ ಅಧಿಕಾರಿಗಳು ಎಲ್ಲ ರೀತಿಯ ನೆರವು ನೀಡುತ್ತಿದ್ದಾರೆ. ಪ್ರಧಾನಿ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಾರೆ.

“ಅಲಮಂಡ ಮತ್ತು ಕಂಟಕಪಲ್ಲಿ ವಿಭಾಗದ ನಡುವೆ ರೈಲು ಹಳಿತಪ್ಪಿ ಸಾವನ್ನಪ್ಪಿದ ಪ್ರತಿ ಸಂತ್ರಸ್ತರ ಕುಟುಂಬಕ್ಕೆ ಪ್ರಧಾನಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ..”

***

 

 

 

***