Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಯುಷ್ಮಾನ್ ಭವ ಅಭಿಯಾನಕ್ಕೆ ದೊರಕಿದ ಉತ್ತಮ ಪ್ರತಿಕ್ರಿಯೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ 


ಆಯುಷ್ಮಾನ್ ಭವ ಅಭಿಯಾನದ ಅಡಿಯಲ್ಲಿ 80,000 ಕ್ಕೂ ಹೆಚ್ಚು ಜನರು ತಮ್ಮ ಅಂಗಾಂಗಗಳನ್ನು ದಾನ ಮಾಡುವ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದು ಅಂಗಾಂಗ ದಾನ ಅಭಿಯಾನದ ಯಶಸ್ಸನ್ನು ತೋರಿಸುತ್ತದೆ ಎಂದು  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್  ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

“ಈ ಪ್ರಯತ್ನಕ್ಕೆ ದೊರಕಿದ ಅಗಾಧ ಪ್ರತಿಕ್ರಿಯೆಯಿಂದ ಸಂತೋಷವಾಗಿದೆ! ಇದು ನಿಜಕ್ಕೂ ಜೀವ ಉಳಿಸುವ ನಿಟ್ಟಿನಲ್ಲಿ ಗಮನಾರ್ಹ ಹೆಜ್ಜೆಯಾಗಿದೆ. ಭವಿಷ್ಯದಲ್ಲಿ ಈ ಉದಾತ್ತ ಉಪಕ್ರಮಕ್ಕೆ ಹೆಚ್ಚಿನ ಜನರು ಸೇರುತ್ತಾರೆ ಎಂದು ನಾನು ಭಾವಿಸುತ್ತೇನೆ.”

 

***