Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಯುಷ್ಮಾನ್ ಭಾರತ್ ಯೋಜನೆಯ ಒಂದು ಕೋಟಿಯ ಫಲಾನುಭವಿಯೊಂದಿಗೆ ಸಂವಾದ ನಡೆಸಿದ ಪ್ರಧಾನ ಮಂತ್ರಿ


ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳ ಸಂಖ್ಯೆ ಒಂದು ಕೋಟಿ ದಾಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂತಸ ವ್ಯಕ್ತಪಡಿಸಿದ್ದಾರೆ.

ಫಲಾನುಭವಿಗಳ ಸಂಖ್ಯೆ ಒಂದು ಕೋಟಿ ದಾಟಿದೆ ಎಂಬುದು ಪ್ರತಿಯೊಬ್ಬ ಭಾರತೀಯರಿಗೂ ಹೆಮ್ಮೆಯ ವಿಷಯ ಎಂದು ಪ್ರಧಾನಿಯವರು ಸರಣಿ ಟ್ವೀಟ್‌ ಮಾಡಿದ್ದಾರೆ.

“ಎರಡು ವರ್ಷಗಳಿಗಿಂತಲೂ ಕಡಿಮೆ ಅವಧಿಯಲ್ಲಿ, ಈ ಉಪಕ್ರಮವು ಅನೇಕರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ. ಎಲ್ಲಾ ಫಲಾನುಭವಿಗಳು ಮತ್ತು ಅವರ ಕುಟುಂಬಗಳನ್ನು ನಾನು ಅಭಿನಂದಿಸುತ್ತೇನೆ. ಅವರ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ” ಎಂದು ಅವರು ಹೇಳಿದ್ದಾರೆ.

ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು ಮತ್ತು ಆಯುಷ್ಮಾನ್ ಭಾರತ್‌ಗೆ ಸಂಬಂಧಿಸಿದಂತೆ ಎಲ್ಲರ ಶ್ರಮವನ್ನು ಶ್ಲಾಘಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದ್ದಾರೆ.

“ಅವರ ಪ್ರಯತ್ನಗಳು ಆಯುಷ್ಮಾನ್ ಭಾರತವನ್ನು ವಿಶ್ವದ ಅತಿದೊಡ್ಡ ಆರೋಗ್ಯ ಕಾರ್ಯಕ್ರಮವನ್ನಾಗಿ ಮಾಡಿವೆ. ಈ ಉಪಕ್ರಮವು ಹಲವಾರು ಭಾರತೀಯರ, ವಿಶೇಷವಾಗಿ ಬಡವರು ಮತ್ತು ದೀನ ದಲಿತರ ವಿಶ್ವಾಸವನ್ನು ಗಳಿಸಿದೆ. ” ಎಂದು ಪ್ರಧಾನಿ ತಿಳಿಸಿದ್ದಾರೆ.

ಆಯುಷ್ಮಾನ್ ಭಾರತದ ಅನುಕೂಲಗಳನ್ನು ವಿವರಿಸಿರುವ ಪ್ರಧಾನಿಯವರು, ಇದರ ಬಹು ದೊಡ್ಡ ಪ್ರಯೋಜನವೆಂದರೆ, ದೇಶದೆಲ್ಲೆಡೆ ಇದರ ಲಭ್ಯತೆ ಎಂದು ಹೇಳಿದ್ದಾರೆ.

“ಫಲಾನುಭವಿಗಳು ತಾವು ನೋಂದಾಯಿಸಿದ ಸ್ಥಳದಲ್ಲಿ ಮಾತ್ರವಲ್ಲದೆ ಭಾರತದ ಯಾವುದೇ ಭಾಗದಲ್ಲಿಯೂ ಉತ್ತಮ ಗುಣಮಟ್ಟದ ವೈದ್ಯಕೀಯ ಆರೈಕೆಯನ್ನು ಪಡೆಯಬಹುದು. ಮನೆಯಿಂದ ದೂರದಲ್ಲಿ ಕೆಲಸ ಮಾಡುವ ಅಥವಾ ತಮ್ಮದಲ್ಲದ ಸ್ಥಳದಲ್ಲಿ ನೋಂದಾಯಿಸಿದವರಿಗೆ ಇದು ಸಹಾಯ ಮಾಡುತ್ತದೆ.” ಎಂದು ಶ್ರೀ ಮೋದಿ ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯಿಂದಾಗಿ ಆಯುಷ್ಮಾನ್ ಭಾರತದ ಫಲಾನುಭವಿಗಳೊಂದಿಗೆ ಸಂವಾದ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಧಾನಿ ಹೇಳಿದರು. ಆದಾಗ್ಯೂ ಅವರು ಆಯುಷ್ಮಾನ್ ಭಾರತದ ಒಂದು ಕೋಟಿಯ ಫಲಾನುಭವಿ ಮೇಘಾಲಯದ ಪೂಜಾ ಥಾಪಾ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು.