Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಸ್ಟ್ರಿಯಾದ ಫೆಡರಲ್ ಚಾನ್ಸಲರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ಗೌರವಾನ್ವಿತ ಶ್ರೀ ಕ್ರಿಶ್ಚಿಯನ್ ಸ್ಟಾಕರ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಸ್ಟ್ರಿಯಾದ ಫೆಡರಲ್ ಚಾನ್ಸಲರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ಗೌರವಾನ್ವಿತ ಶ್ರೀ ಕ್ರಿಶ್ಚಿಯನ್ ಸ್ಟಾಕರ್ ಅವರನ್ನು ಅಭಿನಂದಿಸಿದರು. ಭಾರತ-ಆಸ್ಟ್ರಿಯಾ ವರ್ಧಿತ ಪಾಲುದಾರಿಕೆಯು ಮುಂಬರುವ ವರ್ಷಗಳಲ್ಲಿ ಸ್ಥಿರವಾದ ಪ್ರಗತಿಯನ್ನು ಸಾಧಿಸಲು ಸಜ್ಜಾಗಿದೆ ಎಂದು ಅವರು ಹೇಳಿದರು.

ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಆಸ್ಟ್ರಿಯಾದ ಫೆಡರಲ್ ಚಾನ್ಸಲರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ಗೌರವಾನ್ವಿತ ಕ್ರಿಶ್ಚಿಯನ್ ಸ್ಟಾಕರ್ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಭಾರತ-ಆಸ್ಟ್ರಿಯಾ ವರ್ಧಿತ ಪಾಲುದಾರಿಕೆಯು ಮುಂಬರುವ ವರ್ಷಗಳಲ್ಲಿ ಸ್ಥಿರವಾದ ಪ್ರಗತಿಯನ್ನು ಸಾಧಿಸಲು ಸಜ್ಜಾಗಿದೆ. ನಮ್ಮ ಪರಸ್ಪರ ಲಾಭದಾಯಕ ಸಹಕಾರವನ್ನು ಅಭೂತಪೂರ್ವ ಎತ್ತರಕ್ಕೆ ಕೊಂಡೊಯ್ಯಲು ನಿಮ್ಮೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ. @_CStocker”

 

 

*****