Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಸ್ಟ್ರೇಲಿಯಾದ ಗವರ್ನರ್ ಜನರಲ್ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ

ಆಸ್ಟ್ರೇಲಿಯಾದ ಗವರ್ನರ್ ಜನರಲ್ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ


 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಗವರ್ನರ್-ಜನರಲ್ ಶ್ರೀ ಡೇವಿಡ್ ಹರ್ಲಿ ಅವರನ್ನು 24 ಮೇ 2023 ರಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ಅಡ್ಮಿರಾಲ್ಟಿ ಹೌಸ್‌ನಲ್ಲಿ ಭೇಟಿಯಾದರು.

2019 ರಲ್ಲಿ ನ್ಯೂ ಸೌತ್ ವೇಲ್ಸ್ ಗವರ್ನರ್ ಆಗಿ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗವರ್ನರ್ ಜನರಲ್ ಅವರೊಂದಿಗಿನ ಭೇಟಿಯನ್ನು ಪ್ರಧಾನಿ ಸ್ಮರಿಸಿದರು.

ಉಭಯ ನಾಯಕರು ದೀರ್ಘಕಾಲದ ದ್ವಿಪಕ್ಷೀಯ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದರು.

ಆಸ್ಟ್ರೇಲಿಯಾದಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಗಳನ್ನು ಮತ್ತು ಉಭಯ ದೇಶಗಳ ನಡುವೆ ನಿಕಟ ಸಂಪರ್ಕವನ್ನು ಬೆಳೆಸುವಲ್ಲಿ ಅವರ ಪಾತ್ರವನ್ನು ಪ್ರಧಾನಮಂತ್ರಿಯವರು ಸ್ಮರಿಸಿದರು.

*****