Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಭವ್ಯ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಘೋಷಿಸಿದ ಪ್ರಧಾನಿ


ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಭವ್ಯ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪ್ರತಿಷ್ಠಾಪನೆ ಪೂರ್ಣಗೊಳ್ಳುವವರೆಗೆ, 2022ರ ಜನವರಿ 23ರಂದು ಬೋಸ್‌ ಅವರ ಜನ್ಮ ದಿನದಂದು ಪ್ರಧಾನಮಂತ್ರಿಯವರು ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಸರಣಿ ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ, “ಇಡೀ ರಾಷ್ಟ್ರವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನವನ್ನು ಆಚರಿಸುತ್ತಿರುವ ಈ ಸಮಯದಲ್ಲಿ, ಗ್ರಾನೈಟ್‌ನಿಂದ ಮಾಡಲಾದ ಅವರ ಭವ್ಯ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವು ಎಂಬ ವಿಷಯ ತಿಳಿಸಲು ನನಗೆ ಹರ್ಷವೆನಿಸುತ್ತಿದೆ. ಇದು ಭಾರತವು ಅವರಿಗೆ ಆಭಾರಿಯಾಗಿರುವುದರ ಸಂಕೇತ.”

“ನೇತಾಜಿ ಬೋಸ್ ಅವರ ಭವ್ಯ ಪ್ರತಿಮೆ ಪೂರ್ಣಗೊಳ್ಳುವವರೆಗೆ, ಅವರ ಹೊಲೊಗ್ರಾಮ್ ಪ್ರತಿಮೆ ಅದೇ ಸ್ಥಳದಲ್ಲಿ ಇರಲಿದೆ. ನೇತಾಜಿ ಅವರ ಜನ್ಮ ದಿನವಾದ ಜನವರಿ 23ರಂದು ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದೇನೆ.”

***