Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಇಟಲಿಯ ರೋಮ್‌ನಲ್ಲಿ ನಡೆದ ಜಿ-20 ಶೃಂಗಸಭೆಯ ಸಂದರ್ಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಶ್ರೀ ಜೋಕೊ ವಿಡೋಡೋ ಅವರೊಂದಿಗೆ ಪ್ರಧಾನಿ ಮೋದಿ ಸಭೆ

ಇಟಲಿಯ ರೋಮ್‌ನಲ್ಲಿ ನಡೆದ ಜಿ-20 ಶೃಂಗಸಭೆಯ ಸಂದರ್ಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಶ್ರೀ ಜೋಕೊ ವಿಡೋಡೋ ಅವರೊಂದಿಗೆ ಪ್ರಧಾನಿ ಮೋದಿ ಸಭೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಅಕ್ಟೋಬರ್ 31ರಂದು ಇಟಲಿಯ ರೋಮ್‌ನಲ್ಲಿ ನಡೆದ ಜಿ-20 ಶೃಂಗಸಭೆಯ ಸಂದರ್ಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಜೋಕೊ ವಿಡೋಡೋ ಅವರನ್ನು ಭೇಟಿ ಮಾಡಿದರು. 

ಮುಂದಿನ ವರ್ಷ ಜಿ-20 ಅಧ್ಯಕ್ಷ ಸ್ಥಾನ ವಹಿಸಲಿರುವ ಹಿನ್ನೆಲೆಯಲ್ಲಿ ಇಂಡೋನೇಷ್ಯಾವನ್ನು ಅಭಿನಂದಿಸಿದ ಪ್ರಧಾನಿ ಮೋದಿ, ʻಟ್ರೋಯಿಕಾʼ ಭಾಗವಾಗಿ ಆ ದೇಶದೊಂದಿಗೆ ನಿಕಟವಾಗಿ ಕೆಲಸ ಮಾಡಲು ಭಾರತ ಸಿದ್ಧರಿರುವುದಾಗಿ ಭರವಸೆ ನೀಡಿದರು.
ಭಾರತ-ಇಂಡೋನೇಷ್ಯಾ ನಡುವೆ ಸಮಗ್ರ ಕಾರ್ಯತಂತ್ರಾತ್ಮಕ ಪಾಲುದಾರಿಕೆ ವಿಚಾರದಲ್ಲಿ ಇತ್ತೀಚಿನ ಬೆಳವಣಿಗೆ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು. ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ಪರಸ್ಪರರ ಸ್ಥಿರ ಬೆಂಬಲವನ್ನು ಉಭಯ ನಾಯಕರು ಶ್ಲಾಘಿಸಿದರು ಮತ್ತು ಸಾಂಕ್ರಾಮಿಕದ ಬಳಿಕ ಚೇತರಿಕೆಗೆ ಸಹಕಾರ ನೀಡಲು ಸಹಮತ ವ್ಯಕ್ತಪಡಿಸಿದರು. ಇಂಡೋ-ಪೆಸಿಫಿಕ್ ಸಹಕಾರದ ಮಹತ್ವವನ್ನು ಉಭಯ ನಾಯಕರು ಒತ್ತಿ ಹೇಳಿದರು. 
ಎರಡೂ ದೇಶಗಳ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಬಲಪಡಿಸಲು ಮತ್ತು ಹೆಚ್ಚಿನ ಜನರ ನಡುವಿನ ಸಂವಹನ ವೃದ್ಧಿಗೆ ದಾರಿ ಮಾಡಿಕೊಡಲು ಇಬ್ಬರೂ ನಾಯಕರು ಬದ್ಧತೆ ವ್ಯಕ್ತಪಡಿಸಿದರು. 

ಹವಾಮಾನ ಬದಲಾವಣೆಯನ್ನು ಎದುರಿಸುವ ಬಗ್ಗೆ, ವಿಶೇಷವಾಗಿ ಹವಾಮಾನ ಹಣಕಾಸು ಬದ್ಧತೆಗಳ ಅನುಷ್ಠಾನದ ಅಗತ್ಯದ ಬಗ್ಗೆ ಚರ್ಚಿಸಲಾಯಿತು.

****