Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಜೊತೆ ಸಮಾಲೋಚನೆ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ


ಇಟಲಿ ಪ್ರಧಾನಿ ಶ್ರೀ ಜಾರ್ಜಿಯಾ ಮೆಲೋನಿ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

ಇಟಲಿಯ 79 ನೇ ವಿಮೋಚನಾ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಇಟಲಿ ಜನತೆ ಮತ್ತು ಪ್ರಧಾನಿ ಮೆಲೋನಿ ಅವರಿಗೆ ಪ್ರಧಾನಮಂತ್ರಿ ಅವರು ಶುಭ ಕೋರಿದರು.

ಇಟಲಿಯ ಪುಗ್ಲಿಯಾದಲ್ಲಿ 2024 ರ ಜೂನ್ ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಯ ಅಧಿವೇಶನಗಳಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೆಲೋನಿ ಅವರು ಆಹ್ವಾನ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಧನ್ಯವಾದ ಸಲ್ಲಿಸಿದರು.

ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಹೊರ ಹೊಮ್ಮಿದ ಪ್ರಮುಖ ವಿಚಾರಗಳನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ, ವಿಶೇಷವಾಗಿ ಜಾಗತಿಕ ದಕ್ಷಿಣ ಭಾಗಕ್ಕೆ ಬೆಂಬಲ ನೀಡುವ ಕುರಿತಂತೆ ಇಟಲಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಚರ್ಚಿಸುವ ಕುರಿತಂತೆಯೂ ಉಭಯ ನಾಯಕರು  ಚರ್ಚಿಸಿದರು. 

ದ್ವಿಪಕ್ಷೀಯ ಬಾಂಧವ್ಯವನ್ನು ಬಲಗೊಳಿಸುವುದನ್ನು ಮುಂದುವರೆಸುವ ಕುರಿತಂತೆ ಉಭಯ ನಾಯಕರು ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ.

ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಉಭಯ ನಾಯಕರು ತಮ್ಮ ಅಭಿಪ್ರಾಯ ವಿನಿಯಮಮಾಡಿಕೊಂಡರು.

 

*****