Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ

ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 1ರಂದು ಯುಎಇಯಲ್ಲಿ ನಡೆದ ಸಿಒಪಿ-28 ಶೃಂಗಸಭೆಯ ನೇಪಥ್ಯದಲ್ಲಿ ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಶೌಕತ್ ಮಿರ್ಜಿಯೋಯೆವ್ ಅವರನ್ನು ಭೇಟಿ ಮಾಡಿದರು.

ವಾಯ್ಸ್ ಆಫ್ ಗ್ಲೋಬಲ್ ಸೌತ್ (ಜಾಗತಿಕ ದಕ್ಷಿಣ ಧ್ವನಿಯ) ಶೃಂಗಸಭೆಯಲ್ಲಿ ಉಜ್ಬೇಕಿಸ್ತಾನದ ಭಾಗವಹಿಸುವಿಕೆಗಾಗಿ ಪ್ರಧಾನಮಂತ್ರಿ ಅವರು ಅಧ್ಯಕ್ಷ ಮಿರ್ಜಿಯೋಯೆವ್ ಅವರಿಗೆ ಧನ್ಯವಾದ ಅರ್ಪಿಸಿದರು.

ಇಬ್ಬರೂ ನಾಯಕರು ಆರೋಗ್ಯ, ಶಿಕ್ಷಣ, ಔಷಧೀಯ ಮತ್ತು ಸಾಂಪ್ರದಾಯಿಕ ಔಷಧ ಕ್ಷೇತ್ರಗಳಲ್ಲಿ ತಮ್ಮ ವ್ಯಾಪಕ ದ್ವಿಪಕ್ಷೀಯ ಸಂಬಂಧಗಳನ್ನು ಆಳಗೊಳಿಸುವ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಉಜ್ಬೇಕಿಸ್ತಾನದೊಂದಿಗಿನ ನಮ್ಮ ಅಭಿವೃದ್ಧಿ ಪಾಲುದಾರಿಕೆಯನ್ನು ವಿಸ್ತರಿಸಲು ಭಾರತದ ಬೆಂಬಲ ಕುರಿತು ಪ್ರಧಾನಿ ಭರವಸೆ ನೀಡಿದರು

*****