Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉಜ್ವಲ ಯೋಜನೆಯ ಯಶಸ್ಸಿನ ಬಗ್ಗೆ ಪ್ರಧಾನಿ ಸಂತಸ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಜ್ವಲ ಯೋಜನೆಯ ಫಲಾನುಭವಿಗಳ ಸಂಖ್ಯೆ 2.5ಕೋಟಿ ದಾಟಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

“ಉಜ್ವಲ ಯೋಜನೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದೆ! ಇಂದು ಅದರ ಫಲಾನುಭವಿಗಳ ಸಂಖ್ಯೆ 2.5 ಕೋಟಿ ದಾಟಿರುವುದು ಅತೀವ ಸಂತಸ ತಂದಿದೆ.

ಪಶ್ಚಿಮ ಬಂಗಾಳದ ಜಾಂಗಿಪುರದಲ್ಲಿ ಫಲಾನುಭವಿಗಳಿಗೆ ಎಲ್.ಪಿ.ಜಿ. ಸಂಪರ್ಕ ಹಸ್ತಾಂತರಿಸಿದ ರಾಷ್ಟ್ರಪತಿ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ.

ಉಜ್ವಲ ಯೋಜನೆಯ ಯಶಸ್ಸಿಗಾಗಿ ಹಗಲಿರುಳು ಶ್ರಮಿಸಿದ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಅವರ ಇಡೀ ತಂಡಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

****
AKT/ HS