ಭಾರತ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ಕೃಷ್ಟ ಗುಣಮಟ್ಟದ ಶ್ರೀ ಅನ್ನ ಉತ್ಪನ್ನಗಳ ಪ್ರೋತ್ಸಾಹಕ್ಕೆ ಮಹತ್ವದ ಕ್ರಮ ಕೈಗೊಂಡಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ||ಮನ್ಸುಖ್ ಮಾಂಡವೀಯ ಟ್ವೀಟ್ ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. 15 ಬಗೆಯ ಸಿರಿಧಾನ್ಯಗಳಿಗೆ ಸಮಗ್ರ ಸಮೂಹ ಮಾನದಂಡವನ್ನು ಎಫ್ ಎಸ್ ಎಸ್ ಎ ಐ ಇಂಡಿಯಾ ರೂಪಿಸಿದೆ. ಸ್ಥಳೀಯ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಸಿರಿಧಾನ್ಯ ಲಭ್ಯತೆ ಖಾತರಿಪಡಿಸುವ ನಿಟ್ಟಿನಲ್ಲಿ 8 ಗುಣಮಟ್ಟ ಮಾನದಂಡಗಳನ್ನು ವಿವರಿಸಲಾಗಿದೆ.
“ಭಾರತ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಗುಣಮಟ್ಟದ ಶ್ರೀ ಅನ್ನ ಉತ್ಪನ್ನಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ” ಎಂದು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ:
****
Important step towards encouraging top quality Shree Anna products in India and internationally. https://t.co/HQ0ayxtLFv
— Narendra Modi (@narendramodi) February 26, 2023