Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶದ ಕನೌಜ್‌ ನಲ್ಲಿ ಬಸ್ ಅಪಘಾತ – ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ಸಂತಾಪ; ಪಿ ಎಂ ಎನ್‌ ಆರ್‌ ಎಫ್ ನಿಂದ ಪರಿಹಾರ ಘೋಷಣೆ


ಉತ್ತರಪ್ರದೇಶದ ಕನೌಜ್‌ ನಲ್ಲಿ ಇಂದು ಬಸ್ ಅಪಘಾತದಲ್ಲಿ ಸಂಭವಿಸಿದ ಪ್ರಾಣ ಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್‌ ಆರ್‌ ಎಫ್) ನಿಂದ ಮೃತರ ವಾರಸುದಾರಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ.

ಅವರು ಎಕ್ಸ್‌ ಪೋಸ್ಟ್‌ ನಲ್ಲಿ ಹೀಗೆ ಬರೆದಿದ್ದಾರೆ: 

“ಉತ್ತರಪ್ರದೇಶದ ಕನೌಜ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಜೀವಹಾನಿಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ನೆರವು ನೀಡುತ್ತಿದೆ.

ಮೃತರ ವಾರಸುದಾರರಿಗೆ ಪಿ ಎಂ ಎನ್‌ ಆರ್‌ ಎಫ್‌ ನಿಂದ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು:  ಪ್ರಧಾನಮಂತ್ರಿ

@narendramodi”

 

 

*****