Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿಯವರು ಹಾರೈಸಿದರು.

ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿಯವರು ಘೋಷಿಸಿದರು.

ಪ್ರಧಾನ ಮಂತ್ರಿಯವರ ಕಚೇರಿಯು Xನಲ್ಲಿ ಪೋಸ್ಟ್ ಮಾಡಿ;

“ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ರಸ್ತೆ ಅಪಘಾತವು ನನಗೆ ತುಂಬಾ ನೋವಿನಿಂದ ಕೂಡಿದೆ. ಇದರಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ದೇವರು ಅವರ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಕೋರುತ್ತೇನೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಲ್ಲಿ ತೊಡಗಿದೆ: ಪ್ರಧಾನಿ @narendramodi”

“ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳು ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ” ಎಂದು  ಹೇಳಿದ್ದಾರೆ.

 

 

*****