ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಉಪಗ್ರಹಗಳ ಬಾಹ್ಯಾಕಾಶ ಡಾಕಿಂಗ್ ನ ಯಶಸ್ವಿ ಪ್ರದರ್ಶನಕ್ಕಾಗಿ ಇಸ್ರೋ ಮತ್ತು ಇಡೀ ಬಾಹ್ಯಾಕಾಶ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. ಶ್ರೀ ಮೋದಿಯವರು ಈ ಸಾಹಸೀ ಪ್ರದರ್ಶನವನ್ನು ಮುಂಬರುವ ವರ್ಷಗಳಲ್ಲಿ ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಕಾರ್ಯಾಚರಣೆಗಳ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
“ಉಪಗ್ರಹಗಳ ಬಾಹ್ಯಾಕಾಶ ನಿಲ್ದಾಣದ ಯಶಸ್ವಿ ಪ್ರದರ್ಶನಕ್ಕಾಗಿ @isro ವಿಜ್ಞಾನಿಗಳಿಗೆ ಮತ್ತು ಇಡೀ ಬಾಹ್ಯಾಕಾಶ ಉದ್ಯೋಗಿ ಬಂಧುಗಳಿಗೆ ಅಭಿನಂದನೆಗಳು. ಮುಂಬರುವ ವರ್ಷಗಳಲ್ಲಿ ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಕಾರ್ಯಾಚರಣೆಗಳಿಗೆ ಇದು ಮಹತ್ವದ ಪ್ರಮುಖ ಹೆಜ್ಜೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.
*****
Congratulations to our scientists at @isro and the entire space fraternity for the successful demonstration of space docking of satellites. It is a significant stepping stone for India’s ambitious space missions in the years to come.
— Narendra Modi (@narendramodi) January 16, 2025