Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಉಸ್ತಾದ್ ರಶೀದ್ ಖಾನ್ ರವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿಯವರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತೀಯ ಶಾಸ್ತ್ರೀಯ ಸಂಗೀತ ಜಗತ್ತಿನ ಹೆಸರಾಂತ ಉಸ್ತಾದ್ ರಶೀದ್ ಖಾನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 

ಪಿಎಂ ಮೋದಿಯವರು Xನಲ್ಲಿ ಪೋಸ್ಟ್ ಮಾಡಿ:

“ಭಾರತೀಯ ಶಾಸ್ತ್ರೀಯ ಸಂಗೀತ ಜಗತ್ತಿನ ಹೆಸರಾಂತ ಉಸ್ತಾದ್ ರಶೀದ್ ಖಾನ್ ಜಿಯವರ ನಿಧನದಿಂದ ಬಹಳ ದುಃಖವಾಗಿದೆ. ಅವರ ಸಾಟಿಯಿಲ್ಲದ ಪ್ರತಿಭೆ ಮತ್ತು ಸಂಗೀತ ಸಮರ್ಪಣೆ ನಮ್ಮ ಸಾಂಸ್ಕೃತಿಕ ಜಗತ್ತನ್ನು ಶ್ರೀಮಂತಗೊಳಿಸಿ, ಮುಂಬರುವ ಪೀಳಿಗೆಗೆ ಸ್ಫೂರ್ತಿ ನೀಡಿದೆ. ಅವರ ನಿಧನವು ತುಂಬಲಾಗದ ಶೂನ್ಯವನ್ನು ಸೃಷ್ಟಿಸಿದೆ. ಅವರ ಕುಟುಂಬ, ಶಿಷ್ಯರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು” ಎಂದು ಟ್ವೀಟ್ ಮಾಡಿದ್ದಾರೆ.
 

***