Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಮಂತ್ರಿ ಶ್ರೀ ಮೋದಿಯವರು ಸಿ.ಬಿ.ಸಿ.ಐ. ಯಲ್ಲಿ ತಾವು ಭಾಗವಹಿಸಿದ ಕ್ರಿಸ್ಮಸ್ ಕಾರ್ಯಕ್ರಮದ ಇಣುಕುನೋಟಗಳನ್ನು ಕೂಡಾ ಹಂಚಿಕೊಂಡಿದ್ದಾರೆ. 

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

“ನಿಮ್ಮೆಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು. 

ಯೇಸು ಕ್ರಿಸ್ತನ ಬೋಧನೆಗಳು ಎಲ್ಲರಿಗೂ ಶಾಂತಿ ಮತ್ತು ಸಮೃದ್ಧಿಯ ಮಾರ್ಗವನ್ನು ತೋರಿಸಲಿ. 

ಸಿ.ಬಿ.ಸಿ.ಐ.ನಲ್ಲಿ ಕ್ರಿಸ್ಮಸ್ ಕಾರ್ಯಕ್ರಮದ ಕೆಲವು ಮುಖ್ಯಾಂಶಗಳನ್ನು ನೀವು ಇಲ್ಲಿ ನೋಡಬಹುದು…” ಎಂದು ತಾವು ಭಾಗವಹಿಸಿದ ಕ್ರಿಸ್ಮಸ್ ಕಾರ್ಯಕ್ರಮದ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ.

 

 

*****