Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಕ್ಯಾನೋ ಡಬಲ್ 1000 ಮೀ ಸ್ಪರ್ಧೆಯಲ್ಲಿ ಅರ್ಜುನ್ ಸಿಂಗ್ ಮತ್ತು ಸುನಿಲ್ ಸಿಂಗ್ ಸಲಾಂ ಕಂಚಿನ ಪದಕ ಗೆದ್ದಿದ್ದಕ್ಕೆ ಪ್ರಧಾನ ಮಂತ್ರಿ ಅಭಿನಂದನೆ


ಚೀನಾದ ಹ್ಯಾಂಗ್ಝೌ ನಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಪುರುಷರ ಕ್ಯಾನೋ ಡಬಲ್ 1000 ಮೀ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಸಿಂಗ್ ಮತ್ತು ಸುನಿಲ್ ಸಿಂಗ್ ಸಲಾಮ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಸಂಬಂಧ ಪ್ರಧಾನ ಮಂತ್ರಿ ಸಾಮಾಜಿಕ ಜಾಲತಾಣ X ನಲ್ಲಿ ಸಂದೇಶ ನೀಡಿದ್ದಾರೆ.

ಏಷ್ಯನ್ ಗೇಮ್ಸ್ನಲ್ಲಿ ಪುರುಷರ ಕ್ಯಾನೋ ಡಬಲ್ 1000 ಮೀ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಸಿಂಗ್ ಮತ್ತು ಸುನಿಲ್ ಸಿಂಗ್ ಸಲಾಮ್ ಅವರಿಗೆ ಅಭಿನಂದನೆಗಳು.

ಅವರು ತಮ್ಮ ಅದ್ಭುತ ಸಾಧನೆ ಮತ್ತು ದೃಢಸಂಕಲ್ಪದಿಂದ ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದಾರೆ. ಅವರು ಲಕ್ಷಾಂತರ ಯುವ ಭಾರತೀಯರನ್ನು ತಮ್ಮ ಕನಸುಗಳನ್ನು ಮುಂದುವರಿಸಲು ಮತ್ತು ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರೇಪಿಸಿದ್ದಾರೆ ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

***