Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಏಷ್ಯನ್ ಗೇಮ್ಸ್ 2022 ರಲ್ಲಿ ಮಹಿಳಾ ಜಾವೆಲಿನ್ ಸ್ಪರ್ಧೆಯಲ್ಲಿ ಅಣ್ಣು ರಾಣಿಗೆ ಚಿನ್ನದ ಪದಕ: ಪ್ರಧಾನಿ ಮೋದಿ ಸಂತಸ 


2022ರ ಏಷ್ಯನ್ ಗೇಮ್ಸ್‌ನಲ್ಲಿ ಹ್ಯಾಂಗ್‌ಝೌನಲ್ಲಿ ನಡೆದ ಮಹಿಳಾ ಜಾವೆಲಿನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅಣ್ಣು ರಾಣಿ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

“ಅಥ್ಲೆಟಿಕ್ಸ್‌ನಲ್ಲಿ ಮತ್ತೊಂದು ಚಿನ್ನ! ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ ಜಾವೆಲಿನ್ ಸ್ಪರ್ಧೆಯಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ತೋರಿಸಿದ ಅಣ್ಣು ರಾಣಿಯ ಬಗ್ಗೆ ಅತ್ಯಂತ ಹೆಮ್ಮೆಯಾಗುತ್ತಿದೆ. 

ಅವರು ಗೆದ್ದು ತಂದ ಚಿನ್ನದ ಪದಕದಿಂದ ಭಾರತಕ್ಕೆ ಹೆಮ್ಮೆಯಾಗಿದೆ. ಅವರು ಮುಂದಿನ ದಿನಗಳಲ್ಲಿ ಉನ್ನತ ಗುರಿಯನ್ನು ಹೊಂದಿರಲಿ, ನಮಗೆಲ್ಲರಿಗೂ ಸ್ಫೂರ್ತಿ ನೀಡಲಿ! ” ಎಂದು ಶುಭ ಹಾರೈಸಿದ್ದಾರೆ.

 

***