Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಗೇಮ್ಸ್ 2023ರ ಬಿಲ್ಲುಗಾರಿಕಾ ಮಿಶ್ರ ತಂಡದ ಕಾಂಪೌಂಡ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಜ್ಯೋತಿ ಸುರೇಖಾ ವೆನ್ನಮ್ ಮತ್ತು ಓಜಾಸ್ ಪ್ರವೀಣ್ ಅವರನ್ನು ಪ್ರಶಂಶಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಬಿಲ್ಲುಗಾರಿಕಾ ಮಿಶ್ರ ತಂಡದ ಕಾಂಪೌಂಡ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಜ್ಯೋತಿ ಸುರೇಖಾ ವೆನ್ನಮ್ ಮತ್ತು ಓಜಾಸ್ ಪ್ರವೀಣ್ ಅವರನ್ನು ಅಭಿನಂದಿಸಿದ್ದಾರೆ. 

ಪ್ರಧಾನಮಂತ್ರಿಯವರು X ನಲ್ಲಿ:

‘ಏಷ್ಯನ್ ಗೇಮ್ಸ್ ನಲ್ಲಿ ಬಿಲ್ಲುಗಾರಿಕೆಯಲ್ಲಿ ಮೊದಲ ಚಿನ್ನದ ಪದಕ!

ಮಿಶ್ರ ತಂಡದ ಕಾಂಪೌಂಡ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಜ್ಯೋತಿ ಸುರೇಖಾ ವೆನ್ನಮ್ ಮತ್ತು ಓಜಾಸ್ ಅವರಿಗೆ ಅಭಿನಂದನೆಗಳು. ಅವರ ಅಸಾಧಾರಣ ಕೌಶಲ್ಯ, ನಿಖರತೆ ಮತ್ತು ಪರಸ್ಪರ ಸಹಕಾರದಿಂದ ಉತ್ತಮ ಫಲಿತಾಂಶವನ್ನು ಪಡೆಯಲಾಗಿದೆ. ಅವರಿಗೆ ಅಭಿನಂದನೆಗಳು’ ಎಂದು ಪೋಸ್ಟ್ ಮಾಡಿದ್ದಾರೆ.

 

***