Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಏಷ್ಯನ್‌ ಪ್ಯಾರಾ ಗೇಮ್ಸ್ 2022ರಲ್ಲಿ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಎಸ್‌ಎಲ್‌3 ಸ್ಪರ್ಧೆಯಲ್ಲಿ ಮನ್‌ದೀಪ್ ಕೌರ್ ಅವರು ಕಂಚಿನ ಪದಕ ಗೆದ್ದ ಸಂಭ್ರಮವನ್ನು ಹಂಚಿಕೊಂಡ ಪ್ರಧಾನ ಮಂತ್ರಿಗಳು


ಚೀನಾದ ಹ್ಯಾಂಗ್‌ಜೌನಲ್ಲಿ ನಡೆದ ʼಏಷ್ಯನ್ ಪ್ಯಾರಾ ಗೇಮ್ಸ್- 2022ʼರಲ್ಲಿ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್‌ನಲ ಎಸ್‌ಎಲ್3 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಮನ್‌ದೀಪ್ ಕೌರ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ “ಎಕ್ಸ್‌” ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪೋಸ್ಟ್‌ ಮಾಡಿರುವ ಪ್ರಧಾನ ಮಂತ್ರಿಗಳು,

“ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮಹಿಳಾ ಸಿಂಗಲ್ಸ್ ಎಸ್‌ಎಲ್3 ಸ್ಪರ್ಧೆಯಲ್ಲಿ ಮನ್‌ದೀಪ್‌ ಕೌರ್ ಅವರು ಕಂಚಿನ ಪದಕ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಸಾಧನೆಗಾಗಿ ಅವರನ್ನು ಅಭಿನಂದಿಸುವ ಜತೆಗೆ ಮುಂದಿನ ಪ್ರಯತ್ನಗಳಿಗೆ ಯಶಸ್ಸು ಕೋರುತ್ತೇನೆ,ʼʼ ಎಂದು ಹೇಳಿದ್ದಾರೆ.

 

*****