Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ 200ಮೀಟರ್ ಟಿ35 ಸ್ಪರ್ಧೆಯಲ್ಲಿ ನಾರಾಯಣ್ ಠಾಕೂರ್ ಅವರು ಕಂಚಿನ ಪದಕ ಗಳಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ  


ಚೀನಾದ ಹ್ಯಾಂಗ್ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಪುರುಷರ 200 ಮೀಟರ್ ಟಿ35 ಸ್ಪರ್ಧೆಯಲ್ಲಿ ನಾರಾಯಣ್ ಠಾಕೂರ್ ಅವರು ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ;

“ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಪುರುಷರ 200 ಮೀಟರ್ ಟಿ35 ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಭಾರತಕ್ಕೆ ತಂದಿದ್ದಕ್ಕಾಗಿ ನಾರಾಯಣ್ ಠಾಕೂರ್ ಅವರಿಗೆ ಅಭಿನಂದನೆಗಳು. ಅವರ ಅತ್ಯಂತ ವೇಗದ ಓಟ ಮತ್ತು ಅಚಲವಾದ ಮನೋಭಾವವು ನಮ್ಮ ರಾಷ್ಟ್ರಕ್ಕೆ ಗೌರವವನ್ನು ತಂದಿದೆ.