Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ ಜಾವೆಲಿನ್ ಎಫ್64 ಸ್ಪರ್ಧೆಯಲ್ಲಿ ಪುಷ್ಪೇಂದ್ರ ಸಿಂಗ್ ಗೆ ಕಂಚಿನ ಪದಕ: ಪ್ರಧಾನಿ ಅಭಿನಂದನೆ


ಚೀನಾದ ಹ್ಯಾಂಗ್‌ಝೌನಲ್ಲಿ 2022 ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಜಾವೆಲಿನ್ ಎಫ್64 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಪುಷ್ಪೇಂದ್ರ ಸಿಂಗ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

“ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಜಾವೆಲಿನ್ ಎಫ್64 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಪುಷ್ಪೇಂದ್ರ ಸಿಂಗ್ ಅವರಿಗೆ ಅಭಿನಂದನೆಗಳು. ಆಟದ ವೇಳೆ ಅವರ ಅಸಾಧಾರಣ ಪ್ರದರ್ಶನ, ತಲ್ಲೀನತೆ ಮತ್ತು ಗೆಲ್ಲಬೇಕೆಂಬ ಇಚ್ಛೆ ಅವರಿಗೆ ಪದಕ ತಂದಿದ್ದು, ನಮ್ಮ ರಾಷ್ಟ್ರಕ್ಕೆ ಅಪಾರ ಗೌರವವನ್ನು ತಂದುಕೊಟ್ಟಿದೆ” ಎಂದು ಬರೆದಿದ್ದಾರೆ.