Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

 ಐಎಸ್ಎಸ್ಎಫ್ ಜೂನಿಯರ್ ವಿಶ್ವಕಪ್ನಲ್ಲಿ ಭಾರತೀಯ ಶೂಟರ್‌ಗಳ ಪ್ರದರ್ಶನಕ್ಕಾಗಿ ಪ್ರಧಾನಮಂತ್ರಿಯವರಿಂದ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಐಎಸ್ಎಸ್ಎಫ್ ಜೂನಿಯರ್ ವಿಶ್ವಕಪ್ 2023 ರಲ್ಲಿ ಭಾರತೀಯ ಶೂಟರ್‌ ಗಳ ಸಾಧನೆಗಾಗಿ ಅಭಿನಂದಿಸಿದ್ದಾರೆ.  ಇದರಲ್ಲಿ 15 ಪದಕಗಳೊಂದಿಗೆ ಭಾರತವು ಪದಕಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

ನಮ್ಮ ಶೂಟರ್‌ಗಳು ನಿರಂತರವಾಗಿ ನಮಗೆ ಹೆಮ್ಮೆ ತರುತ್ತಿದ್ದಾರೆ ಎಂದು ಹೇಳಿದರು. ISSF ಜೂನಿಯರ್ ವಿಶ್ವಕಪ್ 2023 ರಲ್ಲಿ ಭಾರತದ ಅದ್ಭುತ ಪ್ರದರ್ಶನವು 15 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪ್ರತಿ ಗೆಲುವು ನಮ್ಮ ಯುವ ಆಟಗಾರರ ಉತ್ಸಾಹ, ಸಮರ್ಪಣೆ ಮತ್ತು ಕ್ರೀಡಾ ಮನೋಭಾವಕ್ಕೆ ಸಾಕ್ಷಿಯಾಗಿದೆ. ಅವರಿಗೆ ಶುಭ ಹಾರೈಕೆಗಳು.

***