Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಐತಿಹಾಸಿಕ ದಂಡಿ ಯಾತ್ರೆಯಲ್ಲಿ ಪಾಲ್ಗೊಂಡ ಮಹಾತ್ಮಾ ಗಾಂಧಿ ಮತ್ತು ಎಲ್ಲರಿಗೂ ಪ್ರಧಾನಮಂತ್ರಿ ಅವರಿಂದ ಗೌರವ ನಮನ


ಐತಿಹಾಸಿಕ ದಂಡಿ ಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವ ನಮನ ಸಲ್ಲಿಸಿ, ಅದು ಭಾರತದ ಸ್ವಾತಂತ್ರ್ಯ ಸಂಗ್ರಾಮದ ನಿರ್ಣಾಯಕ ಘಟ್ಟ ಎಂದು ವ್ಯಾಖ್ಯಾನಿಸಿದರು. ಮಹಾತ್ಮಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಈ ಸತ್ಯಾಗ್ರಹವು ಸ್ವಾವಲಂಬನೆ ಮತ್ತು ಸ್ವಾತಂತ್ರ್ಯಕ್ಕಾಗಿ ರಾಷ್ಟ್ರವ್ಯಾಪಿ ಆಂದೋಲನದ ಕಿಚ್ಚು ಹೊತ್ತಿಸಿತ್ತು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. “ದಂಡಿ ಯಾತ್ರೆಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ, ತ್ಯಾಗ ಹಾಗೂ ಸತ್ಯ ಮತ್ತು ಅಹಿಂಸೆಗಾಗಿ ಅವರ ಅಚಲ ಬದ್ಧತೆಯು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

“ಭಾರತದ ಸ್ವಾತಂತ್ರ್ಯ ಹೋರಾಟದ ನಿರ್ಣಾಯಕ ಅಧ್ಯಾಯವಾದ ಐತಿಹಾಸಿಕ ದಂಡಿ ಸತ್ಯಾಗ್ರಹದಲ್ಲಿ ಭಾಗವಹಿಸಿದ ಎಲ್ಲರಿಗೂ ಇಂದು ನಾವು ಗೌರವ ನಮನ ಸಲ್ಲಿಸುತ್ತೇವೆ.  ಮಹಾತ್ಮಾ ಗಾಂಧಿಯವರ ನೇತೃತ್ವದಲ್ಲಿ ಈ ಯಾತ್ರೆ ರಾಷ್ಟ್ರವ್ಯಾಪಿಯಾಗಿ ಸ್ವಾವಲಂಬನೆ ಮತ್ತು ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿತ್ತು. ದಂಡಿ ಯಾತ್ರೆಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ, ತ್ಯಾಗ ಹಾಗೂ ಸತ್ಯ ಮತ್ತು ಅಹಿಂಸೆಗಾಗಿ ಅವರ ಅಚಲ ಬದ್ಧತೆಯು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ.”

 

 

*****