Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ರಸ್ತೆ ಅಪಘಾತ; ಸಾವು ನೋವಿಗೆ ಪ್ರಧಾನ ಮಂತ್ರಿ ಶೋಕ


ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(ಪಿಎಂಎನ್ ಆರ್ ಎಫ್)ಯಿಂದ ಪರಿಹಾರ ಧನ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳ ಕಾರ್ಯಾಲಯ;
“ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತವು ಹೃದಯ ವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪದ ಜತೆಗೆ. ಗಾಯಾಳುಗಳು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಧನ ಪಾವತಿಸಲಾಗುವುದು ಎಂದು ಪ್ರಧಾನ ಮಂತ್ರಿ ಘೋಷಿಸಿದ್ದಾರೆ.

 

 

********