Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಾಶಿ ತಮಿಳು ಸಂಗಮ ಕುರಿತು ಉತ್ಸುಕತೆ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಶಿ ತಮಿಳು ಸಂಗಮದ ಬಗ್ಗೆ ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ, ಇದು ಭಾರತದ ಉತ್ತರ ಮತ್ತು ದಕ್ಷಿಣ ಪ್ರದೇಶಗಳ ನಡುವಿನ ಅನಾದಿಕಾಲದ ಬಾಂಧವ್ಯಕ್ಕೆ ಉದಾಹರಣೆಯಾಗಿದೆ. ಇದು ತಮಿಳು ಭಾಷೆ ಮತ್ತು ಸಂಸ್ಕೃತಿಯ ಸೊಬಗನ್ನು ಕೊಂಡಾಡುವ ಜೊತೆಗೆ ಏಕ್ ಭಾರತ್ ಶ್ರೇಷ್ಠ ಭಾರತ್ ಮನೋಭಾವದ ಆಚರಣೆಯಾಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಕೇಂದ್ರ ಸಚಿವ ಡಾ. ಎಲ್ ಮುರುಗನ್ ಅವರ ಟ್ವೀಟ್ ಅನ್ನು ಹಂಚಿಕೊಂಡಿರುವ ಪ್ರಧಾನಿಯವರು, ಮರು ಟ್ವೀಟ್ ಮಾಡಿದ್ದಾರೆ.

“ಕಾಶಿ ತಮಿಳು ಸಂಗಮ ಕಾರ್ಯಕ್ರಮದ ಬಗ್ಗೆ ನಾನು ವಿಶೇಷವಾಗಿ ಉತ್ಸುಕನಾಗಿದ್ದೇನೆ. ಇದು ಏಕ್ ಭಾರತ್ ಶ್ರೇಷ್ಠ ಭಾರತ್‌ ಮನೋಭಾವದ ಆಚರಣೆಯಾಗಲಿದೆ ಮತ್ತು ಸುಂದರ ತಮಿಳು ಭಾಷೆ ಮತ್ತು ಸಂಸ್ಕೃತಿಯ ಆಚರಣೆಯೂ ಆಗಿರುತ್ತದೆ” ಎಂದು ಪ್ರಧಾನಿಯವರು ಟ್ವೀಟ್‌ ನಲ್ಲಿ ಹೇಳಿದ್ದಾರೆ.

 

******