Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಿನ್ನೌರ್ ಭೂಕುಸಿತ ಕುರಿತು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೊತೆ ಮಾತನಾಡಿದ ಪ್ರಧಾನಮಂತ್ರಿ


ಕಿನ್ನೌರ್ ನಲ್ಲಿಂದು ಸಂಭವಿಸಿದ ಭೂಕುಸಿತದಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಶ್ರೀ ಜೈರಾಮ್ ಠಾಕೂರ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಹಾಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಸಾಧ್ಯವಿರುವ ಎಲ್ಲ ನೆರವಿನ ಭರವಸೆಯನ್ನು ಪ್ರಧಾನಮಂತ್ರಿಯವರು ನೀಡಿದರು

ಪ್ರಧಾನಮಂತ್ರಿಯವರ ಕಾರ್ಯಾಲಯ ಟ್ವೀಟ್ ಮಾಡಿದ್ದು, “ಪ್ರಧಾನಮಂತ್ರಿ @narendramodi ಅವರು ಕಿನ್ನೌರ್ ಭೂಕುಸಿತದ ಹಿನ್ನೆಲೆಯಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ @jairamthakurbjp ಅವರೊಂದಿಗೆ ಮಾತನಾಡಿದ್ದಾರೆ. ಹಾಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಸಾಧ್ಯವಿರುವ ಎಲ್ಲ ನೆರವಿನ ಭರವಸೆಯನ್ನು ಪ್ರಧಾನಮಂತ್ರಿಯವರು ನೀಡಿದ್ದಾರೆ.”ಎಂದು ತಿಳಿಸಿದೆ.

***