ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಮನ್ಸುಖ್ ಮಾಂಡವಿಯಾ ಅವರು ಆರೋಗ್ಯ ರಕ್ಷಣೆಯಲ್ಲಿ ಹೂಡಿಕೆಯನ್ನು ಗಣನೀಯವಾಗಿ ಹೆಚ್ಚಿಸುವ ಮತ್ತು ಕೊನೆಯ ವ್ಯಕ್ತಿಯವರೆಗೆ ತಲುಪುವ ಮೂಲಕ ಭಾರತದ ಒಟ್ಟಾರೆ ಆರೋಗ್ಯ ಕ್ಷೇತ್ರವನ್ನು ಸುಧಾರಿಸುವ ಬಗ್ಗೆ ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ.
ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿ:
“ದೇಶದ ಅತ್ಯಂತ ದುರ್ಬಲ ಮತ್ತು ಕಟ್ಟಕಡೆಯ ವ್ಯಕ್ತಿಯವರೆಗೆ ಭಾರತ ಸರ್ಕಾರವು ಕೈಗೆಟುಕುವ ಮತ್ತು ಸುಲಭವಾಗಿ ಸಿಗುವ ಗುಣಮಟ್ಟದ ಆರೋಗ್ಯ ಸೇವೆಯನ್ನು ಹೇಗೆ ಒದಗಿಸುತ್ತಿದೆ ಎಂಬುದನ್ನು ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ವಿವರಿಸಿದ್ದಾರೆ” ಎಂದು ಬರೆದುಕೊಂಡಿದೆ.
***
Union Health Minister @mansukhmandviya elaborates how Government of India is providing affordable and accessible quality healthcare to the country’s most vulnerable and last-mile population. https://t.co/4UgwEye9SV
— PMO India (@PMOIndia) July 5, 2023