Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೇಂದ್ರ ಮಾಜಿ ಸಚಿವರಾದ ಡಾ. ದೇಬೇಂದ್ರ ಪ್ರಧಾನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇಂದ್ರ ಮಾಜಿ ಸಚಿವರಾದ ಡಾ. ದೇಬೇಂದ್ರ ಪ್ರಧಾನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ, ಡಾ. ದೇಬೇಂದ್ರ ಪ್ರಧಾನ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಬಡತನ ನಿರ್ಮೂಲನೆ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಒತ್ತು ನೀಡಿದ್ದಕ್ಕಾಗಿ ಸಂಸದ ಮತ್ತು ಸಚಿವರಾಗಿ ಡಾ. ದೇಬೇಂದ್ರ ಪ್ರಧಾನ್ ಜೀ ಅವರ ಕೊಡುಗೆ ಗಮನಾರ್ಹವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಶ್ರೀ ಮೋದಿ ಅವರು  ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಡಾ. ದೇಬೇಂದ್ರ ಪ್ರಧಾನ್ ಜೀ ಅವರು ಕಠಿಣ ಪರಿಶ್ರಮಿ ಮತ್ತು ವಿನಮ್ರ ನಾಯಕರಾಗಿ ಛಾಪು ಮೂಡಿಸಿದ್ದಾರೆ. ಒಡಿಶಾದಲ್ಲಿ ಬಿಜೆಪಿಯನ್ನು ಬಲಪಡಿಸಲು ಅವರು ಹಲವಾರು ಪ್ರಯತ್ನಗಳನ್ನು ಮಾಡಿದ್ದರು. ಸಂಸದ ಮತ್ತು ಸಚಿವರಾಗಿ ಬಡತನ ನಿರ್ಮೂಲನೆ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಅವರು ಗಮನಾರ್ಹ‌ ಕೊಡುಗೆ ನೀಡಿದ್ದರು. ಅವರು ನಿಧನರಾಗಿರುವುದಕ್ಕೆ ನೋವಾಗಿದೆ. ನನ್ನ ಅಂತಿಮ ನಮನ ಸಲ್ಲಿಸಲು ಹೋಗಿದ್ದೆ ಮತ್ತು ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದೇನೆ. ಓಂ ಶಾಂತಿ. 

@dpradhanbjp”

 

“ଡକ୍ଟର ଦେବେନ୍ଦ୍ର ପ୍ରଧାନ ଜୀ ଜଣେ ପରିଶ୍ରମୀ ଏବଂ ନମ୍ର ନେତା ଭାବେ ନିଜର ସ୍ୱତନ୍ତ୍ର ପରିଚୟ ସୃଷ୍ଟି କରିଥିଲେ। ଓଡ଼ିଶାରେ ବିଜେପିକୁ ମଜବୁତ କରିବା ପାଇଁ ସେ ଅନେକ ପ୍ରୟାସ କରିଥିଲେ। ଦାରିଦ୍ର୍ୟ ଦୂରୀକରଣ ଏବଂ ସାମାଜିକ ସଶକ୍ତିକରଣ ଉପରେ ଗୁରୁତ୍ୱ ଦେଇ ଜଣେ ସାଂସଦ ଏବଂ ମନ୍ତ୍ରୀ ଭାବେ ତାଙ୍କର ଅବଦାନ ମଧ୍ୟ ଉଲ୍ଲେଖନୀୟ। ତାଙ୍କ ବିୟୋଗରେ ମୁଁ ଶୋକାଭିଭୂତ। ମୁଁ ତାଙ୍କର ଶେଷ ଦର୍ଶନ କରିବା ସହିତ ତାଙ୍କ ପରିବାର ପ୍ରତି ସମବେଦନା ଜଣାଇଲି। ଓଁ ଶାନ୍ତି।”

 

 

*****