Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೇಂದ್ರ ಸರ್ಕಾರವು ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು ಸಾಧ್ಯವಿರುವ ಎಲ್ಲಾ ನೆರವು ನೀಡಲು ರಾಜ್ಯ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ: ಪ್ರಧಾನಮಂತ್ರಿ.


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕೇಂದ್ರ ಸರ್ಕಾರವು ಅಸ್ಸಾಂನ ಪ್ರವಾಹ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದೆ ಮತ್ತು ಈ ಸಮಸ್ಯೆಯನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲಾ ನೆರವು ನೀಡಲು ರಾಜ್ಯ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

 

ಸರಣಿ ಟ್ವೀಟ್‌ಗಳಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿರುವರು:

 

“ಕಳೆದ ಕೆಲವು ದಿನಗಳಿಂದ, ಭಾರೀ ಮಳೆಯಿಂದಾಗಿ ಅಸ್ಸಾಂನ ಕೆಲವು ಭಾಗಗಳು ಪ್ರವಾಹಕ್ಕೆ ಸಿಲುಕಿವೆ. ಕೇಂದ್ರ ಸರ್ಕಾರವು ಅಸ್ಸಾಂನ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು ಈ ಸಮಸ್ಯೆಯನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲಾ ನೆರವು ನೀಡಲು ರಾಜ್ಯ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ.”

 

“ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೇನೆ ಮತ್ತು ಎನ್‍ಡಿಆರ್‍ಎಫ್‍ ಪಡೆಗಳು ಇವೆ. ಅವುಗಳು ಸ್ಥಳಾಂತರಿಸುವ ಕಾರ್ಯಾಚರಣೆಗಳನ್ನು ನಡೆಸುತ್ತಿರುವವು ಮತ್ತು ತೊಂದರೆಗೊಳಗಾದವರಿಗೆ ಸಹಾಯ ಮಾಡುತ್ತಿರುವವು. ಸ್ಥಳಾಂತರಿಸುವ ಪ್ರಕ್ರಿಯೆಯ ಭಾಗವಾಗಿ ವಾಯುಪಡೆಯು 250 ಕ್ಕೂ ಹೆಚ್ಚು ವಿಮಾನ ಹಾರಾಟಗಳನ್ನು ಕೈಗೊಂಡಿದೆ.”

 

“ಮುಖ್ಯಮಂತ್ರಿ @himantabiswa ಹಿಮಂತಬಿಸ್ವಾ, ಅಸ್ಸಾಂ ಸರ್ಕಾರದ ಮಂತ್ರಿಗಳು ಮತ್ತು ಅಧಿಕಾರಿಗಳು ಜಿಲ್ಲೆಗಳಲ್ಲಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ ಮತ್ತು ನೊಂದವರಿಗೆ ಸಹಾಯ ಮಾಡುತ್ತಿದ್ದಾರೆ. ಪೀಡಿತ ಪ್ರದೇಶಗಳಲ್ಲಿರುವ ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಮತ್ತು ಸಾಧ್ಯವಿರುವ ಎಲ್ಲಾ ಬೆಂಬಲದ ಭರವಸೆಯನ್ನು ಮತ್ತೊಮ್ಮೆ ನೀಡುತ್ತೇನೆ.”

 

******