ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಕೇಂದ್ರ ಸರ್ಕಾರಿ ನೌಕರರಿಗೆ 01.01.2025 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಪ್ರಸ್ತುತ ತುಟ್ಟಿ ಭತ್ಯೆಯು ಮೂಲ ವೇತನ/ ಪಿಂಚಣಿಯ ಶೇ.53 ರಷ್ಟಿದ್ದು ಈಗ ಶೇ.2 ರಷ್ಟು ಹೆಚ್ಚಳ ಮಾಡಲಾಗಿದೆ.
ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಎರಡರ ಹೆಚ್ಚಳದ ಕಾರಣದಿಂದ ಬೊಕ್ಕಸದ ಮೇಲಿನ ಸಂಯೋಜಿತ ವಾರ್ಷಿಕ ವೆಚ್ಚ ರೂ. 6614.04 ಕೋಟಿ. ಈ ಹೆಚ್ಚಳದಿಂದಾಗಿ 48.66 ಲಕ್ಷ ಕೇಂದ್ರ ಸರ್ಕಾರಿ ಉದ್ಯೋಗಿಗಳು ಮತ್ತು 66.55 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ.
*****